ಶಿವಮೊಗ್ಗ | ಮಾಚೇನಹಳ್ಳಿಯ ಮದರ್ ತೆರೇಸಾ ಕಿವುಡ ಮತ್ತು ಮೂಕ ಮಕ್ಕಳ ವಸತಿ ಶಾಲೆಗೆ ಶೇ. 100 ರಷ್ಟು ಫಲಿತಾಂಶ

ಶಿವಮೊಗ್ಗ

ಶಿವಮೊಗ್ಗ,ಮಾಚೇನಹಳ್ಳಿಯ ಮದರ್ ತೆರೇಸಾ ಕಿವುಡ ಮತ್ತು ಮೂಕ ಮಕ್ಕಳ ವಸತಿ ಶಾಲೆಯ ವಿದ್ಯಾರ್ಥಿಗಳು ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಶೇ. 100 ರಷ್ಟು ಫಲಿತಾಂಶ ಪಡೆದಿದ್ದಾರೆ.

ರಾಜ್ಯದಲ್ಲಿ ವಾಕ್ ಮತ್ತು ಶ್ರವಣದೋಷವುಳ್ಳ ಮಕ್ಕಳಲ್ಲಿ ಶಾಲೆಯ ವಿದ್ಯಾರ್ಥಿನಿ ಲಕ್ಷ್ಮೀಪ್ರಿಯಾ ರಾಜ್ಯಕ್ಕೆ ಪ್ರಥಮ, ಆದರ್ಶ್ ಕೆ. ಯು ದ್ವಿತೀಯ, ಕುಶಾಲ್ ಎಂ ತೃತೀಯ ಸ್ಥಾನ ಪಡೆದಿದ್ದಾರೆ.

ಒಟ್ಟು 19 ವಿದಾರ್ಥಿಗಳಲ್ಲಿ 4 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್, 13 ವಿದ್ಯಾರ್ಥಿಗಳು ಪ್ರಥಮ ದರ್ಜೆ, ಮತ್ತು 2 ವಿದ್ಯಾರ್ಥಿಗಳು ದ್ವಿತೀಯ ದರ್ಜೆಯಲ್ಲಿ ಉತೀರ್ಣರಾಗಿದ್ದಾರೆ.

ಇವರಿಗೆ ಆಡಳಿತ ಮಂಡಳಿ, ಪ್ರಾಂಶುಪಾಲರಾದ ರೆವರೆಂಡ್ ಫಾದರ್ ರೋಬಿನ್, ಸಿಬ್ಬಂದಿ ವರ್ಗದವರು ಅಭಿನಂದಿಸದ್ದಾರೆ.

Author