ಶಿವಮೊಗ್ಗ | ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ; ಅಪರಾಧಿಗೆ 20 ವರ್ಷ ಕಠಿಣ ಶಿಕ್ಷೆವಿಧಿಸಿದ ನ್ಯಾಯಾಲಯ

ಶಿವಮೊಗ್ಗ

ಶಿವಮೊಗ್ಗ, ಅಪ್ರಾಪ್ತಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪ ಸಾಬೀತಾದ ಹಿನ್ನಲೆಯಲ್ಲಿ ವ್ಯಕ್ತಿಯೊಬ್ಬನಿಗೆ 20 ವರ್ಷ ಕಠಿಣ ಶಿಕ್ಷೆ ಮತ್ತು 1 ಲಕ್ಷ ರೂ. ದಂಡ ವಿಧಿಸಿ ಇಲ್ಲಿನ ಹೆಚ್ಚುವರಿ ಜಿಲ್ಲಾ ಹಾಗೂ ಸತ್ರ ನ್ಯಾಯಾಲಯ ತೀರ್ಪು ನೀಡಿದೆ.

2023 ರಲ್ಲಿ ತುಂಗಾನಗರ ಠಾಣಾ ವ್ಯಾಪ್ತಿಯಲ್ಲಿ 26 ವರ್ಷದ ವ್ಯಕ್ತಿಯೊಬ್ಬ 17 ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಬಗ್ಗೆ ಪೋಕ್ಸೋ ಕಾಯ್ದೆ ಯಡಿ ತುಂಗಾನಗರ ಪೊಲೀಸರು ಕೇಸು ದಾಖಲಿಸಿಕೊಂಡಿದ್ದರು.

ಪ್ರಕರಣದ ತನಿಖೆ ನಡೆಸಿದ್ದ ಇನ್ಸ್ ಪೆಕ್ಟರ್ ಮಂಜುನಾಥ್ ಬಿ. ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದರು.ವಿಚಾರಣೆ ನಡೆಸಿದ ಹೆಚ್ಚುವರಿ ಜಿಲ್ಲಾ ಹಾಗೂ ಸತ್ರ ನ್ಯಾಯಾಲಯದ ನ್ಯಾಯಮೂರ್ತಿ ನಿಂಗನಗೌಡ ಬಿ ಪಾಟೀಲ್ ಆರೋಪ ಸಾಬೀತಾದ ಹಿನ್ನಲೆಯಲ್ಲಿ ಅರೋಪಿಗೆ 20 ವರ್ಷ ಕಠಿಣ ಶಿಕ್ಷೆ ಮತ್ತು ೧ಲಕ್ಷ ರೂ. ದಂಡ ವಿಧಿಸಿ ನೆನ್ನೆ ತೀರ್ಪು ನೀಡಿದ್ದಾರೆ.

ಅಪರಾಧಿಯು ದಂಡ ಕಟ್ಟುವಲ್ಲಿ ವಇಫಲನಾದಲ್ಲಿ ೨ ವರ್ಷ ಸಾದಾ ಜೈಲು ಶಿಕ್ಷೆ ವಿಧಿಸಿದ್ದಾರೆ.ದಂಡ ಪರಿಹಾರದ ಹಣದಲ್ಲಿ 75 ಸಾವಿರ ರೂಪಾಯಿಗಳನ್ನು ಸಂತ್ರಸ್ತ ಬಾಲಕಿಗೆ ನೀಡಬೇಕು ಮತ್ತು ರಾಜ್ಯ ಸರ್ಕಾರ 4 ಲಕ್ಷ ರೂ.ಗಳನ್ನು ಪರಿಹಾರವಾಗಿ ನೀಡುವಂತೆ ತೀರ್ಪು ನೀಡಲಾಗಿದೆ.

ಸರ್ಕಾರದ ಪರವಾಗಿ ಅಭಿಯೋಜಕರಾದ ಶ್ರೀಧರ್ ಸರ್ಕಾರಿ ಅಭಿಯೋಜಕರವರು ವಾದ ಮಂಡಿಸಿದ್ದರು.

Author