ಬೆಂಗಳೂರು,ರಾಜಕಾರಣಿಗಳು ಹಾಗೂ ಅವರ ಮಕ್ಕಳು ಕನ್ನಡ ಚಿತ್ರರಂಗ ಪ್ರವೇಶಿಸೋದು ಕಾಮನ್ ಆಗಿದೆ. ಇದೀಗ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ನಿರ್ಮಾಪಕಿಯಾಗಿ ಸ್ಯಾಂಡಲ್ವುಡ್ಗೆ ಎಂಟ್ರಿ ಕೊಟ್ಟಿದ್ದಾರೆ.
ಅಷ್ಟಕ್ಕೂ ಯಾವ ಹೀರೋಗೆ ಲಕ್ಷ್ಮೀ ಹೆಬ್ಬಾಳ್ಕರ್ ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ ಅಂದುಕೊಂಡ್ರಾ?. ಅವರು ಬೇರೆ ಯಾರೂ ಅಲ್ಲ. ನಟರಾಕ್ಷಸ ಖ್ಯಾತಿಯ ಡಾಲಿ ಧನಂಜಯ್.
ಹೌದು, ‘ಅಣ್ಣ ಫ್ರಮ್ ಮೆಕ್ಸಿಕೋ‘ ಶೀರ್ಷಿಕೆಯಡಿ ಡಾಲಿ ಧನಂಜಯ್ ಸಿನಿಮಾ ಬರುತ್ತಿರೋದು ನಿಮಗೆ ತಿಳಿದಿರುವ ವಿಚಾರವೇ. ಇದೇ ಚಿತ್ರಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬಂಡವಾಳ ಹೂಡಿದ್ದಾರೆ. ಈ ಮೂಲಕ ನಿರ್ಮಾಪಕಿಯಾಗಿ ಹೊರಹೊಮ್ಮಿದ್ದಾರೆ.

‘ಅಣ್ಣ ಫ್ರಮ್ ಮೆಕ್ಸಿಕೋ’ ಟೀಸರ್ ರಿಲೀಸ್ ಈವೆಂಟ್ ಇತ್ತೀಚೆಗೆ ಈ ಚಿತ್ರದ ಟೀಸರ್ ಬಿಡುಗಡೆ ಕಾರ್ಯಕ್ರಮ ಬೆಂಗಳೂರಿನ ಖಾಸಗಿ ಹೋಟೆಲ್ನಲ್ಲಿ ನಡೆಯಿತು. ಜ್ಯೋತಿ ಬೆಳಗಿಸುವ ಮೂಲಕ ಈ ಕಾರ್ಯಕ್ರಮಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಚಾಲನೆ ನೀಡಿದರು.
ಈ ಸಂದರ್ಭ ಸಹೋದರ ಹಾಗೂ ವಿಧಾನ ಪರಿಷತ್ ಸದಸ್ಯ ಚನ್ನರಾಜ್ ಹಟ್ಟಿಹೊಳಿ, ಮೂಡಿಗೆರೆ ಕ್ಷೇತ್ರದ ಶಾಸಕಿ ನಯನ ಮೋಟಮ್ಮ, ಚಿತ್ರದ ನಾಯಕ ನಟ ಡಾಲಿ ಧನಂಜಯ್, ನಟಿ ರೀಷ್ಮಾ ನಾಣಯ್ಯ, ನಿರ್ದೇಶಕ ಶಂಕರ್ ಗುರು, ಸಹ ನಿರ್ಮಾಪಕರಾದ ಸತ್ಯ ರಾಯಲ್, ಝೀ ಸ್ಟುಡಿಯೋಸ್ನ ದಿವ್ಯಾ, ಆನಂದ್ ಆಡಿಯೋ ಸಂಸ್ಥೆಯ ಶ್ಯಾಮ್, ಸಂಗೀತ ನಿರ್ದೇಶಕ ವಾಸುಕಿ ವೈಭವ್, ನಟ ನಾಗಭೂಷಣ್ ಸೇರಿದಂತೆ ಚಿತ್ರತಂಡದ ಸದಸ್ಯರು ಉಪಸ್ಥಿತರಿದ್ದರು.
ಐರಾ ಫಿಲ್ಮ್ ವತಿಯಿಂದ ನಿರ್ಮಾಣಗೊಂಡಿರುವ ‘ಅಣ್ಣ from Mexico’ ಚಿತ್ರದ ಸಂಪೂರ್ಣ ಕೆಲಸವನ್ನು ಲಕ್ಷ್ಮೀ ಹೆಬ್ಬಾಳ್ಕರ್ ಸಹೋದರ ಚನ್ನರಾಜ್ ಹಟ್ಟಿಹೊಳಿ ನೋಡಿಕೊಳ್ಳುತ್ತಿದ್ದಾರೆ

