ಶಿವಮೊಗ್ಗ | ವಕೀಲರ ರಾಜ್ಯ ಮಟ್ಟದ ಕ್ರಿಕೆಟ್, ಥ್ರೋಬಾಲ್ ಹಾಗೂ ಶಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿಗೆ ಚಾಲನೆ

ಶಿವಮೊಗ್ಗ

ಶಿವಮೊಗ್ಗ ವಕೀಲರ ಸಂಘದ 125 ನೇ ಶತಮಾನೋತ್ತರ ರಜತ ಮಹೋತ್ಸವದ ಐತಿಹಾಸಿಕ ಸಂದರ್ಭದ ಅಂಗವಾಗಿ ಇಂದು ಸಹ್ಯಾದ್ರಿ ಕಾಲೇಜು ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ವಕೀಲರ ರಾಜ್ಯ ಮಟ್ಟದ ಕ್ರಿಕೆಟ್, ಥ್ರೋಬಾಲ್ ಹಾಗೂ ಶಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿ – 2026 ಕ್ಕೆ ಚಾಲನೆ ನೀಡಲಾಯಿತು.

ಈ ಕ್ರೀಡಾಕೂಟ ಕಾರ್ಯಕ್ರಮದಲ್ಲಿ ಮಾತನಾಡಿದ ಸಂಸದ ಬಿ.ವೈ.ರಾಘವೇಂದ್ರ, ಶಿವಮೊಗ್ಗ ವಕೀಲರ ಸಂಘವು 125 ವರ್ಷಗಳ ಸುದೀರ್ಘ ಮತ್ತು ಅರ್ಥಪೂರ್ಣ ಇತಿಹಾಸವನ್ನು ಹೊಂದಿದ್ದು, ಈ ಸಂಭ್ರಮವನ್ನು ಕ್ರೀಡೆಗಳ ಮೂಲಕ ಆಚರಿಸುತ್ತಿರುವುದು ಹೆಮ್ಮೆಯ ವಿಷಯ.

ಕಾನೂನು ವೃತ್ತಿಯ ಒತ್ತಡದ ನಡುವೆ ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳುವಲ್ಲಿ ಕ್ರೀಡೆಗಳು ಪ್ರಮುಖ ಪಾತ್ರ ವಹಿಸುತ್ತವೆ ಎಂದರು.

ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಶಿವಮೊಗ್ಗ ನಗರ ಶಾಸಕ ಎಸ್.ಎನ್.ಚನ್ನಬಸಪ್ಪ, ಕಳೆದ 125 ವರ್ಷಗಳಿಂದ ಸಮಾಜದಲ್ಲಿ ನ್ಯಾಯ ಮತ್ತು ಸಮಾನತೆಯನ್ನು ಎತ್ತಿಹಿಡಿಯುವಲ್ಲಿ ಶಿವಮೊಗ್ಗ ಜಿಲ್ಲಾ ವಕೀಲರ ಸಂಘದ ಪಾತ್ರ ಅತ್ಯಂತ ದೊಡ್ಡದು. ಒತ್ತಡದ ಬದುಕಿನಲ್ಲಿ ಕ್ರೀಡೆಗಳು ದೈಹಿಕ ಮತ್ತು ಮಾನಸಿಕ ಆರೋಗ್ಯಕ್ಕೆ ಪೂರಕ ಎಂದು ಶಿವಮೊಗ್ಗ ನಗರ ಶಾಸಕ ಎಸ್.ಎನ್.ಚನ್ನಬಸಪ್ಪ ಬಣ್ಣಿಸಿದರು.

ರಾಜ್ಯದ ವಿವಿಧ ಭಾಗಗಳಿಂದ ಆಗಮಿಸಿರುವ ವಕೀಲ ಮಿತ್ರರಲ್ಲಿ ಕ್ರೀಡಾ ಮನೋಭಾವ ಮತ್ತು ಸೌಹಾರ್ದತೆಯನ್ನು ವೃದ್ಧಿಸಲು ಈ ಕ್ರೀಡಾಕೂಟವು ಒಂದು ಉತ್ತಮ ವೇದಿಕೆಯಾಗಿದೆ ಎಂದರು.

Author