ತಮಿಳುನಾಡಿಗೆ ದಳಪತಿಯೇ ‘ಅಧಿಪತಿ’, ; ಮುಖ್ಯಮಂತ್ರಿಯಾಗಿ ವಿಜಯ್​​ ಪ್ರಮಾಣವಚನ

ತಮಿಳುನಾಡು

ತಮಿಳುನಾಡಿನಲ್ಲಿ ಐದು ದಿನಗಳ ರಾಜಕೀಯ ಹೈಡ್ರಾಮಕ್ಕೆ ಕೊನೆಗೂ ತೆರೆ ಬಿದ್ದಿದ್ದು, ಏಕೈಕ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿರುವ ತಮಿಳಗ ವೆಟ್ರಿ ಕಳಗಂ(ಟಿವಿಕೆ) ಪಕ್ಷಕ್ಕೆ ಸರ್ಕಾರ ರಚನೆಗೆ ರಾಜ್ಯಪಾಲರು ಅವಕಾಶ ನೀಡಿದ್ದಾರೆ. ಟಿವಿಕೆ ಮುಖ್ಯಸ್ಥ ವಿಜಯ್ಇಂದು (ಮೇ 10) ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ಟಿಡಿಪಿ ನಾಯಕ ವಿಜಯ್ ಇಂದು ಬೆಳಿಗ್ಗೆ 10 ಗಂಟೆಗೆ ತಮಿಳುನಾಡಿನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಚೆನ್ನೈನ ನೆಹರೂ ಒಳಾಂಗಣ ಕ್ರೀಡಾಂಗಣದಲ್ಲಿ ಪ್ರಮಾಣ ವಚನ ಕಾರ್ಯಕ್ರಮಕ್ಕೆ ಭರ್ಜರಿ ವ್ಯವಸ್ಥೆ ಮಾಡಲಾಗಿದೆ.

ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ, ತಮಿಳುನಾಡು ಟಿವಿಕೆ ಪಾರ್ಟಿ 108 ಸ್ಥಾನಗಳನ್ನು ಗೆದ್ದುಕೊಂಡಿತ್ತು. ಬಳಿಕ ಕಾಂಗ್ರೆಸ್ ಮೈತ್ರಿಕೂಟ ಮತ್ತು ಕಮ್ಯುನಿಸ್ಟ್ ಪಕ್ಷಗಳ ಬೆಂಬಲದೊಂದಿಗೆ ಟಿವಿಕೆ ಬಹುಮತವನ್ನು ಗಳಿಸಿದೆ. ನಂತರವೇ ರಾಜ್ಯಪಾಲರು ಟಿವಿಕೆಯನ್ನು ಸರ್ಕಾರ ರಚಿಸಲು ಆಹ್ವಾನಿಸಿದರು.

ಇನ್ನು ಇಂದು ಬೆಳಿಗ್ಗೆ 10 ಗಂಟೆಗೆ ನಡೆಯಲಿರುವ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿರುವರು.

Author