ಭದ್ರಾವತಿ | ಕರೆಂಟ್ ಶಾಕ್ : ಯುವಕ ಸಾವು

ಅವಘಡ ದುರಂತ

ಭದ್ರಾವತಿ, ತಾಲೂಕಿನ ಹೊಳೆಹೊನ್ನೂರು ಪಟ್ಟಣದ ಕುಂಬಾರ ಬೀದಿಯಲ್ಲಿ ಮನೆಯೊಂದರಲ್ಲಿ ಕೆಲಸ ಮಾಡುತ್ತಿದ್ದ ಯುವಕನಿಗೆ ಕರೆಂಟ್ ಶಾಕ್ ಹೊಡೆದಿದೆ. ಪರಿಣಾಮ 28 ವರ್ಷದ ಚೇತನ್ ಎಂಬ ಯುವಕ ಮೃತಪಟ್ಟಿದ್ದಾನೆ.

ಗಾರೆ ಕೆಲಸಕ್ಕೆ ನೀರು ಒದಗಿಸಲು, ಸಾಕೆಟ್‌ಗೆ ವೈರ್ ಸಿಕ್ಕಿಸಲು ಮುಂದಾದಾಗ ಈ ಘಟನೆ ಸಂಭವಿಸಿದೆ.

ಘಟನೆ ನಡೆದ ಬೆನ್ನಲ್ಲೆ ಈತನನ್ನು ಸಮೀಪದ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ. ಮಾರ್ಗ ಮಧ್ಯೆ ಯುವಕ ಸಾವನ್ನಪ್ಪಿದ್ದ.

ಈ ಸಂಬಂಧ ಹೊಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

Author