ಶಿವಮೊಗ್ಗ | ಐಟಿಐ ಪ್ರವೇಶಕ್ಕೆ ಆನ್‌ಲೈನ್ ಅರ್ಜಿ ಆಹ್ವಾನ

ಶಿವಮೊಗ್ಗ

ಶಿವಮೊಗ್ಗ, ಜಿಲ್ಲಾ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯು ಶಿವಮೊಗ್ಗ ತಾಲೂಕು ಗಾಜನೂರು ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿನ ವಿವಿಧ ವೃತ್ತಿಗಳಿಗೆ 2026-27ನೇ ಸಾಲಿನ ಎನ್.ಸಿ.ವಿ.ಟಿ. ಯೋಜನೆಯಡಿ ಐಟಿಐ ಪ್ರವೇಶಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ.

ಎಸ್.ಎಸ್.ಎಲ್.ಸಿ./ಪಿ.ಯು.ಸಿ./ ಪದವಿ ಪಾಸ್/ಫೇಲ್ ಆದ ವಿದ್ಯಾರ್ಥಿಗಳು ವೆಬ್‌ಸೈಟ್ www.cite.karnataka.gov.in ಮೂಲಕ ಅಥವಾ ಸಂಸ್ಥೆಗೆ ಭೇಟಿ ನೀಡಿ ಖುದ್ದಾಗಿ ಅರ್ಜಿ ಸಲ್ಲಿಸುವಂತೆ ಸಂಸ್ಥೆಯ ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಹೆಚ್ಚಿನ ಮಾಹಿತಿಗಾಗಿ ದೂ.ಸಂ.: 9448722232/ 9449775239 ಗಳನ್ನು ಸಂಪರ್ಕಿಸುವುದು.

Author