ಕನ್ನಡದ ಖ್ಯಾತ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ!

ಕರ್ನಾಟಕ

ಬೆಂಗಳೂರು, ಸ್ಯಾಂಡಲ್‌ವುಡ್‌ಗೆ ಮತ್ತೊಂದು ದೊಡ್ಡ ಆಘಾತ ಉಂಟಾಗಿದೆ. ನಟ, ನಿರ್ಮಾಪಕ ದಿಲೀಪ್ ರಾಜ್ ಅವರು ಹೃದಯಾಘಾತದಿಂದ ಇಂದು ನಿಧನರಾದರು.

47 ವಯಸ್ಸಿನ ದಿಲೀಪ್ ರಾಜ್ ಅವರಿಗೆ ಇಂದು ಬುಧವಾರ (ಮೇ 13) ಬೆಳಗಿನ ಜಾವ ಹೃದಯಾಘಾತ ಸಂಭವಿಸಿತ್ತು. ಆಸ್ಪತ್ರೆಗೆ ಕರೆದೊಯ್ಯಲಾಯಿತು, ಆದರೆ ಚಿಕಿತ್ಸೆ ಫಲಕಾರಿಯಾಗದೇ ಅವರು ಮೃತಪಟ್ಟಿದ್ದಾರೆ.

ನಟ ದಿ.ಪುನೀತ್ ರಾಜ್ ಕುಮಾರ್ ಅಭಿನಯನದ ‘ಮಿಲನ’ ಸಿನಿಮಾ ಸೇರಿದಂತೆ ಕನ್ನಡ ಚಿತ್ರರಂಗದಲ್ಲಿ ಹಲವು ಸಿನಿಮಾಗಳಲ್ಲಿ ನಟಿಸಿದ್ದರು. ‘ಹಿಟ್ಲರ್ ಕಲ್ಯಾಣ’ ಧಾರವಾಹಿ ಮೂಲಕ ಕಮ್ ಬ್ಯಾಕ್ ಮಾಡಿದ್ದ ನಟ ಮನೆ ಮಾತಾಗಿದ್ದರು. ಇಂತಹ ಪ್ರತಿಭಾನ್ವಿತ ನಟ ಇಂದು ಆಪ್ತರು, ಕುಟುಂಬವನ್ನು ಅಗಲಿದ್ದಾರೆ.

ಕಿರುತೆರೆಯಿಂದಲೇ ಬೆಳ್ಳಿತೆರೆಗೆ ಬಂದಿದ್ದ ಅವರು ಕೆಲವು ಸಿನಿಮಾಗಳ ಬಳಿಕ ಮತ್ತೆ ಕಿರುತೆರೆಯಲ್ಲಿ ಕಾಣಿಸಿಕೊಂಡಿದ್ದರು. ಸಿನಿಮಾ ಮತ್ತು ಟಿವಿ ಎರಡರಲ್ಲೂ ತೊಡಗಿಕೊಂಡಿದ್ದರು. 2005ರಲ್ಲಿ ತೆರೆ ಕಂಡಿದ್ದ ‘ಬಾಯ್‌ ಫ್ರೆಂಡ್’ ಸಿನಿಮಾದಲ್ಲಿ ನಾಯಕ ನಟರಾಗಿ ಬಣ್ಣಲೋಕ ಪ್ರವೇಶಿಸಿದ್ದರು. ಇನ್ನೂ ಅಪ್ಪು ಅಭಿನಯನದ ‘ಮಿಲನ’ ಸಿನಿಮಾದಲ್ಲಿ ಪ್ರಮುಖ ಪಾತ್ರ ನಿರ್ವಹಿಸಿದ್ದರು.

Author