ಶಿವಮೊಗ್ಗ, ಬೈಕ್ ಅಪಘಾತದಲ್ಲಿ ತೀವ್ರ ಗಾಯಗೊಂಡಿದ್ದ ಸಕ್ರೆಬೈಲಿನ ಪ್ರಕೃತಿ ಫಿಶ್ ಹೊಟೇಲ್ ಮಾಲೀಕ ವಿಜಯ್ ಕುಮಾರ್ ಕೊನೆಯುಸಿರೆಳೆದಿದ್ದಾರೆ.
ಸೋಮವಾರ ರಾತ್ರಿ ಶಿವಮೊಗ್ಗದಿಂದ ಸಕ್ರೆಬೈಲು ಕಡೆಗೆ ತೆರಳುವಾಗ ಅಪಘಾತ ಸಂಭವಿಸಿತ್ತು. ಅರಕೆರೆ ಬಳಿ ಅಪಘಾತವಾಗಿ ವಿಜಯ್ ಕುಮಾರ್ (42) ಅವರ ತಲೆಗೆ ತೀವ್ರ ಪೆಟ್ಟಾಗಿತ್ತು ಕೂಡಲೆ ಅವರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ನಗರದ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿತ್ತು.
ಕಳೆದ ರಾತ್ರಿಯೆ ವಿಜಯ್ ಕುಮಾರ್ ಅವರನ್ನು ಮಣಿಪಾಲದ ಆಸ್ಪತ್ರೆಗೆ (KMC Manipal) ಕರೆದೊಯ್ದು ದಾಖಲು ಮಾಡಲಾಗಿತ್ತು. ನೆನ್ನೆ ಮಧ್ಯಾಹ್ನದವರೆಗೆ ಚಿಕಿತ್ಸೆ ನಡೆಯಿತು. ಆದರೆ ಮಧ್ಯಾಹ್ನ ಚಿಕಿತ್ಸೆಗೆ ಸ್ಪಂದಿಸದೆ ವಿಜಯ್ ಕುಮಾರ್ ಕೊನೆಯುಸಿರೆಳೆದಿದ್ದಾರೆ.

