ಶಿವಮೊಗ್ಗ | ಯುವ ಕಾಂಗ್ರೆಸ್ ಪ್ರತಿಭಟನೆ ; ಸಂಸದರ ಮನೆ ಮುತ್ತಿಗೆಗೆ ಯತ್ನ..!

ರಾಜಸ್ಥಾನ ಹಾಗೂ ಉತ್ತರಾಖಾಂಡ್‌ನಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆಯಾದ ವದಂತಿಗಳ ಬೆನ್ನಲ್ಲೇ ಪಾರದರ್ಶಕತೆ ಕಾಪಾಡಲು ವಿಫಲವಾಗಿರುವ ಕೇಂದ್ರ ಸರ್ಕಾರ ಪರೀಕ್ಷೆಯನ್ನೇ ರದ್ದುಗೊಳಿಸಿರುವುದು ಲಕ್ಷಾಂತರ ವಿದ್ಯಾರ್ಥಿಗಳ ಕನಸಿಗೆ ತಣ್ಣೀರೆರಚಿದಂತಾಗಿದೆ ಎಂದು ಪ್ರತಿಭಟನಾಕಾರರು ಕಿಡಿಕಾರಿದರು. ಪ್ರತಿಭಟನೆಯ ತೀವ್ರತೆ ಹೆಚ್ಚಾದಂತೆ, ಯುವ ಕಾಂಗ್ರೆಸ್ ಕಾರ್ಯಕರ್ತರು ಬ್ಯಾರಿಕೇಡ್‌ಗಳನ್ನು ತಳ್ಳಿ ಸಂಸದರ ಮನೆಗೆ ನುಗ್ಗಲು ಪ್ರಯತ್ನಿಸಿದರು.