ಶಿವಮೊಗ್ಗ | ಕುವೆಂಪು ವಿವಿಯಲ್ಲಿ ನಾಳೆಯಿಂದ ವನ್ಯಜೀವಿ ಸಂಘರ್ಷ, ಸಹಬಾಳ್ವೆ ಮತ್ತು ಜೀವವೈವಿಧ್ಯ ಸಂರಕ್ಷಣೆ ಕುರಿತು ಎರಡು ದಿನಗಳ ರಾಷ್ಟ್ರೀಯ ಸಮ್ಮೇಳನ

ಕುವೆಂಪು ವಿವಿ ಕುಲಪತಿ ಪ್ರೊ. ಶರತ್ ಅನಂತಮೂರ್ತಿ ಸಮ್ಮೇಳನದ ಅಧ್ಯಕ್ಷತೆ ವಹಿಸಲಿದ್ದಾರೆ. ಸಾಕಾನ್ (SACON) ಸಂಸ್ಥೆಯ ಮುಖ್ಯ ವಿಜ್ಞಾನಿ ಡಾ. ಎಚ್.ಎನ್. ಕುಮಾರ್ ಅವರು ಮುಖ್ಯ ಭಾಷಣ ಮಾಡಲಿದ್ದಾರೆ. ಎರಡು ದಿನಗಳ ಈ ಸಮ್ಮೇಳನದಲ್ಲಿ ವನ್ಯಜೀವಿ ತಜ್ಞರಿಂದ ಹನ್ನೆರಡು ವಿಶೇಷ ಉಪನ್ಯಾಸಗಳು ನಡೆಯಲಿವೆ.