ಶಿವಮೊಗ್ಗ | ಇಬ್ಬರು ಹಿರಿಯ ಮಹನೀಯರಿಗೆ ಜೀವಮಾನ ಸಾಧನೆ ಪ್ರಶಸ್ತಿ ಪ್ರದಾನ

ಶಿವಮೊಗ್ಗ

ಶಿವಮೊಗ್ಗದ ಕರ್ನಾಟಕ ಸಂಘದಲ್ಲಿ 15 ಮೇ 2026ರ ಶುಕ್ರವಾರ, ‘2026ರ ಜೀವಮಾನ ಸಾಧನೆ ಪ್ರಶಸ್ತಿ ಪ್ರದಾನ ಸಮಾರಂಭ’ ವನ್ನು ಹಮ್ಮಿಕೊಳ್ಳಲಾಗಿದೆ.

ಅಂದು ಸಂಜೆ 5:30 ಘಂಟೆಗೆ ನಾಡಿನ ಖ್ಯಾತ ಕವಿ ಮತ್ತು ಸಾಹಿತಿ ಸುಳ್ಯದ ಸುಬ್ರಾಯ ಚೊಕ್ಕಾಡಿ ಅವರಿಗೆ ‘ ದ.ರಾ. ಬೇಂದ್ರೆ ಕಾವ್ಯ ಪ್ರಶಸ್ತಿ’ ಯನ್ನು ಮತ್ತು ಸಾಹಿತಿ, ವಿಮರ್ಶಕ ಬೆಂಗಳೂರಿನ ಪ್ರೊ. ನರಹಳ್ಳಿ ಬಾಲಸುಬ್ರಹ್ಮಣ್ಯ ಅವರಿಗೆ ‘ ತೀ.ನಂ.ಶ್ರೀ. ಸಾಹಿತ್ಯ ವಿಮರ್ಶೆ ಪ್ರಶಸ್ತಿ’ಯನ್ನು ನೀಡಿ ಗೌರವಿಸಲಾಗುವುದು.

ಸುಬ್ರಾಯ ಚೊಕ್ಕಾಡಿ ಅವರ ಕುರಿತು ಸುಳ್ಯದ ಸಾಹಿತಿ ಕೆ.ಪಿ. ಸುರೇಶ ಮತ್ತು ನರಹಳ್ಳಿ ಬಾಲಸುಬ್ರಹ್ಮಣ್ಯ ಅವರ ಕುರಿತು ಉಜಿರೆ ಕಾಲೇಜಿನ ಪ್ರಾಧ್ಯಾಪಕ ಹಳೇಮನೆ ರಾಜಶೇಖರ ಅಭಿನಂದನಾ ನುಡಿಗಳನ್ನಾಡಲಿದ್ದಾರೆ.

ಪ್ರಶಸ್ತಿಯು ೨೫,೦೦೦ ರೂ. ನಗದು ಹಾಗೂ ಪ್ರಶಸ್ತಿ ಫಲಕವನ್ನು ಒಳಗೊಂಡಿದೆ. ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಪ್ರೊ. ಹೆಚ್.ಆರ್. ಶಂಕರನಾರಾಯಣ ಶಾಸ್ತ್ರಿ ಅವರು ವಹಿಸಲಿದ್ದಾರೆ.

Author