ಶಿವಮೊಗ್ಗ | “ಮಾಡೋಕೆ ಕೆಲಸ ಇಲ್ಲದವ, ಬೆಕ್ಕಿನ ಬಾಲ ಬೋಳಿಸಿದನಂತೆ” ; ಶಿಕ್ಷಣ ಸಚಿವ ಮಧು ಬಂಗಾರಪ್ಪ ವಿರುದ್ಧ ಬಿಜೆಪಿ ವ್ಯಂಗ್ಯ..!

ದೇಶದ ಲಕ್ಷಾಂತರ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಪರೀಕ್ಷಾ ಪಾರದರ್ಶಕತೆ ಕಾಪಾಡಲು ಕೇಂದ್ರ ಸರ್ಕಾರ ಶ್ರಮಿಸುತ್ತಿದ್ದರೆ, ಸಿದ್ದರಾಮಯ್ಯನವರು ಅದಕ್ಕೆ ಅಡ್ಡಿಪಡಿಸುವ ಕೆಲಸ ಮಾಡುತ್ತಿದ್ದಾರೆ. ರಾಜ್ಯದಲ್ಲಿ ಇವರದೇ ಸರ್ಕಾರ ನಡೆಸಿದ ಸಿಇಟಿ (CET) ಪರೀಕ್ಷೆಯಲ್ಲಿ ಸಾವಿರಾರು ಲೋಪದೋಷಗಳು ಕಂಡುಬಂದಾಗ ಮುಖ್ಯಮಂತ್ರಿಗಳ ನೈತಿಕತೆ ಎಲ್ಲೋಗಿತ್ತು? ತಮ್ಮ ರಾಜ್ಯದ ಶಿಕ್ಷಣ ವ್ಯವಸ್ಥೆಯನ್ನು ಸರಿಪಡಿಸಲು ಸಾಧ್ಯವಾಗದವರು ಕೇಂದ್ರ ಸಚಿವರ ರಾಜೀನಾಮೆ ಕೇಳುತ್ತಿರುವುದು ಹಾಸ್ಯಾಸ್ಪದ.