ಸಿದ್ದಾಪುರ, ಜನಗಣತಿ ಕಾರ್ಯದ ಮಾಹಿತಿ ನೀಡಲು ಸ್ಕೂಟರ್ ನಲ್ಲಿ ಬರುತ್ತಿದ್ದ ಶಿಕ್ಷಕಿಗೆ ಟ್ರ್ಯಾಕ್ಟರ್ ಡಿಕ್ಕಿ ಹೊಡೆದ ಪರಿಣಾಮ ಶಿಕ್ಷಕಿ ಸ್ಥಳದಲ್ಲೇ ಮೃತಪಟ್ಟ ಘಟನೆ ಶಿರಸಿ ಸಿದ್ದಾಪುರ ಮುಖ್ಯ ರಸ್ತೆಯ ಕನ್ನಳ್ಳಿ (ಮಳವತ್ತಿ ) ಚೆಕ್ ಪೋಸ್ಟ್ ಬಳಿ ನಡೆದಿದೆ.
ಸಿರ್ಸಿ ಕಡೆಯಿಂದ ಸಿದ್ದಾಪುರ ಕಡೆಗೆ ಬರುತ್ತಿದ್ದ ಕಟ್ಟಿಗೆ ತುಂಬಿದ ಟ್ರ್ಯಾಕ್ಟರ್ ಸ್ಕೂಟರ್ ಗೆ ಡಿಕ್ಕಿ ಹೊಡೆದ ಪರಿಣಾಮ ಘಟನೆ ಸಂಭವಿಸಿದೆ.
ಪೂರ್ಣಿಮಾ ಭಟ್ (46) ಮೃತಪಟ್ಟ ದುರ್ದೈವಿ.ಇವರು ಪಟ್ಟಣದ ಹೊಸೂರ್ ನ ಪ್ರಾಥಮಿಕ ಶಾಲೆಯಲ್ಲಿ ಸಹ ಶಿಕ್ಷಕಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು ಎನ್ನಲಾಗಿದೆ.
ಟ್ರ್ಯಾಕ್ಟರ್ ನ್ನ ಅತಿವೇಗ ಹಾಗೂ ನಿರ್ಲಕ್ಷತನದಿಂದ ಚಲಾಯಿಸಿ ಅಪಘಾತಕ್ಕೆ ಕಾರಣನಾದ ಹಾವೇರಿ ಮೂಲದ ಟ್ರ್ಯಾಕ್ಟರ್ ಚಾಲಕ ಆಕಾಶ ಮಂಜಪ್ಪ ಬಾಲಣ್ಣನವರ್ ವಿರುದ್ಧ ದೂರು ದಾಖಲಾಗಿದೆ.

