ಶಿವಮೊಗ್ಗ | ಅಪಘಾತದಲ್ಲಿ ಮೃತರಾಗಿದ್ದ ಕೆಎಸ್‌ಆರ್‌ಟಿಸಿ ಸಿಬ್ಬಂದಿಯ ಕುಟುಂಬಕ್ಕೆ 1 ಕೋಟಿ ಪರಿಹಾರ

ಶಿವಮೊಗ್ಗ

ಶಿವಮೊಗ್ಗ, ಅಪಘಾತವೊಂದರಲ್ಲಿ ಸಾವನ್ನಪ್ಪಿದ್ದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಸಿಬ್ಬಂದಿಯೊಬ್ಬರ ಕುಟುಂಬಕ್ಕೆ ಒಂದು ಕೋಟಿ ರೂಪಾಯಿ ಪರಿಹಾರ ಸಿಕ್ಕಿದೆ.

ಕೆಎಸ್‌ಆರ್‌ಟಿಸಿ ಚಾಲಕರಾಗಿದ್ದ ವೀರಣ್ಣ ಸೇಬಿನಕಟ್ಟಿ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದರು, ಅವರ ಕುಟುಂಬಕ್ಕೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಿಂದ ಅಪಘಾತ ವಿಮಾ ಯೋಜನೆಯಡಿ ಒಟ್ಟು 1 ಕೋಟಿ ರೂಪಾಯಿ ಪರಿಹಾರ ಮೊತ್ತವನ್ನು ಗುರುವಾರ ಚೆಕ್‌ ಮೂಲಕ ನೀಡಲಾಯಿತು.

ಶಿವಮೊಗ್ಗದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಪ್ರಾದೇಶಿಕ ವ್ಯವಸ್ಥಾಪಕ ವಿಜಯ ಸಾಯಿ ಮಡುಗಲ ಅವರು ಮೃತರ ಕುಟುಂಬದ ಸದಸ್ಯರಿಗೆ ಪರಿಹಾರದ ಚೆಕ್‌ ಅನ್ನು ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಕೆಎಸ್‌ಆರ್‌ಟಿಸಿ ಶಿವಮೊಗ್ಗ ವಿಭಾಗೀಯ ನಿಯಂತ್ರಕ ಟಿ.ಆರ್. ನವೀನ್, ಎಸ್‌ಬಿಐ ಅಧಿಕಾರಿಗಳು ಹಾಗೂ ಕೆಎಸ್‌ಆರ್‌ಟಿಸಿ ಸಿಬ್ಬಂದಿ ಉಪಸ್ಥಿತರಿದ್ದರು.

Author