ನವದೆಹಲಿ, ನಿರೀಕ್ಷೆಯಂತೆ ದೇಶಾದ್ಯಂತ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಪ್ರತಿ ಲೀಟರ್‌ಗೆ 3 ರೂಪಾಯಿ ಹೆಚ್ಚಳವಾಗಿದೆ.
ತೈಲ ಮಾರಾಟ ಕಂಪನಿಗಳು ಜಾಗತಿಕ ಮಾರುಕಟ್ಟೆಯ ಇಂಧನ ದರ ಏರಿಕೆಗೆ ಅನುಗುಣವಾಗಿ ದರವನ್ನು ಏರಿಕೆ ಮಾಡಿದೆ. ಪರಿಷ್ಕೃತ ದರ ಇಂದು ಬೆಳಿಗ್ಗೆಯಿಂದಲೇ ಜಾರಿಯಾಗಿದೆ.
ದರ ಏರಿಕೆಯಿಂದ ಬೆಂಗಳೂರಿನಲ್ಲಿ ಪ್ರತಿ ಲೀಟರ್ ದರ 106.17 ರೂ. ಏರಿಕೆಯಾದರೆ ಡಿಸೇಲ್ ದರ 94.10 ರೂ. ತಲುಪಿದೆ.
ಅಂತರರಾಷ್ಟ್ರೀಯ ಮಟ್ಟದಲ್ಲಿ ಕಚ್ಚಾ ತೈಲದ ಬೆಲೆಯಲ್ಲಿ ಸತತ ಏರಿಳಿತವಾಗುತ್ತಿದೆ. ಪಶ್ಚಿಮ ಏಷ್ಯಾ ಹಾಗೂ ಇರಾನ್ ಸಂಘರ್ಷದಿಂದಾಗಿ ತೈಲ ಸಾಗಣೆಯ ಜಲಮಾರ್ಗಗಳಲ್ಲಿ ವ್ಯತ್ಯಯ ಉಂಟಾಗಿದೆ. ಡಾಲರ್ ಎದುರು ಭಾರತೀಯ ರೂಪಾಯಿ ಮೌಲ್ಯ ಕುಸಿದಿರುವುದರಿಂದ ಆಮದು ವೆಚ್ಚ ಹೆಚ್ಚಾಗಿದ್ದರಿಂದ ದರ ಏರಿಕೆ ಮಾಡಲಾಗಿದೆ.
ಟೆಂಪೋ ಮತ್ತು ಟ್ರಕ್‌ಗಳು ಡೀಸೆಲ್ ಬಳಸುವುದರಿಂದ ಸರಕು ಸಾಗಣೆ ದರಗಳು ತಕ್ಷಣವೇ ದುಬಾರಿಯಾಗಲಿವೆ. ಸಾಗಣೆ ವೆಚ್ಚ ಹೆಚ್ಚಾಗುವುದರಿಂದ ಮಾರುಕಟ್ಟೆಗೆ ಬರುವ ತರಕಾರಿ, ಹಣ್ಣು, ಧಾನ್ಯಗಳು ಮತ್ತು ಹಾಲಿನ ಬೆಲೆಗಳು ಹೆಚ್ಚಾಗಲಿವೆ. ಖಾಸಗಿ ಬಸ್ಸುಗಳು, ಆಟೋ ಮತ್ತು ಟ್ಯಾಕ್ಸಿಗಳ ಪ್ರಯಾಣ ದರವೂ ಏರಿಕೆಯಾಗಲಿದೆ.

