ಶಿವಮೊಗ್ಗ | ಅಂತೂ ಇಂತೂ ಮಹಾನಗರ ಪಾಲಿಕೆ ಹಾಗೂ ಟ್ರಾಫಿಕ್ ಪೊಲೀಸ್ ಜಂಟಿ ಕಾರ್ಯಾಚರಣೆ ಮೂಲಕ ಅನಧಿಕೃತ ಹೂವಿನ ಮಾರುಕಟ್ಟೆ ಒತ್ತುವರಿ ತೆರವು ಕಾರ್ಯಾಚರಣೆ ಯಶಸ್ವಿ..!

ಈ ಒಂದು ಕಾರ್ಯಾಚರಣೆಯಲ್ಲಿ ಮಹಾನಗರ ಪಾಲಿಕೆ ಅಧಿಕಾರಿಯಾದ ವೀರೇಶ್ ಪೂಜಾರ್ ಹಾಗೂ ಸರ್ಕಲ್ ಇನ್ಸ್ಪೆಕ್ಟರ್ ದೇವರಾಜ್ ಹಾಗೂ ಸಿಬ್ಬಂದಿಗಳು ಪಾಲ್ಗೊಂಡಿದ್ದರು.ಹಾಗೂ ಹೂವಿನ ವ್ಯಾಪಾರಿಗಳಿಗೆ ಬೇರೆ ಸ್ಥಳದಲ್ಲಿ ವ್ಯಾಪಾರ ಮಾಡಲು ಅನುವುಮಾಡಿಕೊಟ್ಟಿದ್ದರು ಆದರೂ ಸಹಿತ ವ್ಯಾಪಾರಿಗಳು ಅದನ್ನು ಬಳಸಿಕೊಳ್ಳದೆ ಇದ್ದ ಕಾರಣ ಇಂದು ಒತ್ತುವರಿ ತೆರವು ಕಾರ್ಯಾಚರಣೆ ಮೂಲಕ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ.