ಶಿವಮೊಗ್ಗ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಅಧೀನದಲ್ಲಿರುವ ಬ್ರಹ್ಮಾವರದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ 2 ವರ್ಷಗಳ ಕನ್ನಡ ಮಾಧ್ಯಮದಲ್ಲಿ ಡಿಪ್ಲೊಮಾ ಕೃಷಿ ಕೋರ್ಸ್ಗೆ ಆಸಕ್ತ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಶಿವಮೊಗ್ಗದಲ್ಲಿ ಕೃಷಿ ಡಿಪ್ಲೊಮಾ ಕೋರ್ಸ್ಗೆ ಪ್ರವೇಶ ಕೋರುವ ಅಭ್ಯರ್ಥಿಗಳು ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಕನ್ನಡ ಪಠ್ಯವನ್ನು ಭಾಷೆಯಾಗಿ ಅಭ್ಯಸಿಸಿ ಕನಿಷ್ಟ ಶೇ. 45 ಅಂಕಗಳೊಂದಿಗೆ ಹಾಗೂ ಪ.ಜಾ./ಪ.ಪಂ./ಪ್ರವರ್ಗ-1 ರವರುಗಳಿಗೆ ಕನಿಷ್ಠ ಶೇ. 40 ಅಂಕಗಳೊಂದಿಗೆ ಉತ್ತೀರ್ಣರಾಗಿರಬೇಕು.
ದಿನಾಂಕ: 12-06-2026 ರಂದು ಅಭ್ಯರ್ಥಿಗಳ ವಯಸ್ಸು 19 ವರ್ಷಗಳನ್ನು ಮೀರಿರಬಾರದು. ರೈತರ ಹಾಗೂ ಕೃಷಿ ಕಾರ್ಮಿಕರ ಮಕ್ಕಳಿಗೆ ಶೇ. 50 ರಷ್ಟು ಸೀಟುಗಳನ್ನು ಡಿಪ್ಲೊಮಾ (ಕೃಷಿ) ಪ್ರವೇಶಾತಿಗೆ ಮೀಸಲಿಡಲಾಗಿದೆ.
ಆಸಕ್ತರು ವೆಬ್‌ಸೈಟ್ www.uahs.edu.in ನಲ್ಲಿ ಡೌನ್ ಲೋಡ್ ಮಾಡಿಕೊಂಡು, ಭರ್ತಿಮಾಡಿದ ಅರ್ಜಿಗಳನ್ನು ಮತ್ತು ಅರ್ಜಿಯ ನಿಗದಿತ ಶುಲ್ಕ ಸಾಮಾನ್ಯ ವರ್ಗದವರಿಗೆ ರೂ. 500/-, ಪ.ಜಾ./ಪ.ಪಂ./ಪ್ರವರ್ಗ-1ರವರಿಗೆ ರೂ. 250/- ಗಳ ರಾಷ್ಟ್ರೀಕೃತ ಬ್ಯಾಂಕ್‌ಗಳ ಡಿ.ಡಿ. ಯನ್ನು Comptroller, KSNUAHS, Shivamogga – 577412 ಇವರ ಹೆಸರಿನಲ್ಲಿ ಪಡೆದು, ಎಲ್ಲಾ ಅಗತ್ಯ ದಾಖಲೆಗಳೊಂದಿಗೆ ಕುಲಸಚಿವರು, ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಶಿವಮೊಗ್ಗ, ಇರುವಕ್ಕಿ ಆವರಣ- 577 412 ಇಲ್ಲಿಗೆ ಜೂ. 12 ರೊಳಗಾಗಿ ಖುದ್ದಾಗಿ ಸಲ್ಲಿಸುವುದು ಅಥವಾ ಅಂಚೆ ಮೂಲಕ ಕಳುಹಿಸುವುದು.
ಸರ್ಕಾರದ ಆದೇಶಗಳ ಅನ್ವಯ ಸೀಟುಗಳನ್ನು ಭರ್ತಿ ಮಾಡಲಾಗುವುದು. ಅರ್ಹ ಅಭ್ಯರ್ಥಿಗಳನ್ನು ಮೆರಿಟ್ ಆಧಾರದ ಮೇಲೆ ರೋಸ್ಟರ್ ಪದ್ದತಿಯನ್ನು ಅಳವಡಿಸಿ ಪ್ರವೇಶ ಮತ್ತು ಆಯ್ಕೆ ಮಾಡಲಾಗುವುದು.
ಪ್ರವೇಶಕ್ಕೆ ಆಯ್ಕೆ ಮಾಡಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಪತ್ರ ಹಾಗೂ ವೆಬ್‌ಸೈಟ್ ಮುಖಾಂತರ ತಿಳಿಸಲಾಗುವುದು ಎಂದು ವಿಶ್ವವಿದ್ಯಾಲಯದ ಕುಲಸಚಿವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಹೆಚ್ಚಿನ ಮಾಹಿತಿ, ಅಧಿಸೂಚನೆ, ಅರ್ಜಿ ಹಾಗೂ ಮಾಹಿತಿ ಪುಸ್ತಕವನ್ನು ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ವೆಬ್‌ಸೈಟ್ www.uahs.edu.in ನ್ನು ಅಥವಾ ವಿಶ್ವವಿದ್ಯಾಲಯದ ಕಚೇರಿಯನ್ನು ಖುದ್ದಾಗಿ ಸಂಪರ್ಕಿಸುವುದು.

