ರಾಜ್ಯ ಸರ್ಕಾರಿ ನೌಕರರ ಸೌಹಾರ್ದ ಸಹಕಾರಿ ಸಂಘ ನಿ, ಶಿವಮೊಗ್ಗ ವತಿಯಿಂದ ಪ್ರತಿಭಾ ಪುರಸ್ಕಾರಕ್ಕಾಗಿ ಅರ್ಜಿ ಆಹ್ವಾನ

ಶಿವಮೊಗ್ಗ

ರಾಜ್ಯ ಸರ್ಕಾರಿ ನೌಕರರ ಸೌಹಾರ್ದ ಸಹಕಾರಿ ಸಂಘ ನಿ, ಶಿವಮೊಗ್ಗ ವತಿಯಿಂದ 2026ನೇ ಸಾಲಿನಲ್ಲಿ ನಡೆದ ಎಸ್.ಎಸ್.ಎಲ್.ಸಿ, 10ನೇ ತರಗತಿ (ಸಿ.ಬಿ.ಎಸ್.ಇ ಮತ್ತು ಐ.ಸಿ.ಎಸ್.ಇ). ದ್ವಿತೀಯ ಪಿಯುಸಿ ಹಾಗೂ 12ನೇ ತರಗತಿ (ಸಿ.ಬಿ.ಎಸ್.ಇ ಮತ್ತು ಐ.ಸಿ.ಎಸ್.ಇ ) ಪರೀಕ್ಷೆಯಲ್ಲಿ ಶೇಕಡ 90ಕ್ಕೂ ಅಧಿಕ ಅಂಕ ಪಡೆದ ಸಹಕಾರಿಯ ಸದಸ್ಯರ ಮಕ್ಕಳಿಗೆ ಮಾತ್ರ ಪ್ರತಿಭಾ ಪುರಸ್ಕಾರಕ್ಕಾಗಿ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ದಿನಾಂಕ: 15-06-2026ರೊಳಗೆ ಈ ಮುಂದಿನ ಲಿಂಕನ್ನು ಬಳಸಿ bit.ly/empsouhardashimoga ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸುವುದು.

ಹೆಚ್ಚಿನ ಮಾಹಿತಿಗಾಗಿ ಕಛೇರಿ ಮೊಬೈಲ್ ಸಂಖ್ಯೆ: 7676245604 ಹಾಗೂ ಎನ್.ಎಂ.ರಂಗನಾಥ: 9916278470 ಇವರನ್ನು ಸಂಪರ್ಕಿಸಲು ಸೌಹಾರ್ದ ಸಹಕಾರಿಯ ಅಧ್ಯಕ್ಷರಾದ ಆರ್.ಮೋಹನ್ ಕುಮಾರ್ ರವರು ತಮ್ಮ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Author