3 ವರ್ಷದ ಡಿಪ್ಲೋಮಾ ಕೋರ್ಸ್ ಪ್ರವೇಶಾತಿಗೆ ಅರ್ಜಿ ಆಹ್ವಾನ

ಶಿವಮೊಗ್ಗ

ಶಿವಮೊಗ್ಗ ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನ ಇಲಾಖೆ ಹಾಗೂ ಜಿಲ್ಲಾ ಪಂಚಾಯತ್, ಶಿವಮೊಗ್ಗ ಇವರ ವತಿಯಿಂದ 2026-27 ನೇ ಸಾಲಿನ ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನದಲ್ಲಿ 03 ವರ್ಷಗಳ ಡಿಪ್ಲೋಮಾ (ಡಿ.ಹೆಚ್.ಟಿ.ಟಿ) ಕೋರ್ಸ್ ಪ್ರವೇಶಕ್ಕಾಗಿ ಅರ್ಹ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಈ ಸಾಲಿನಲ್ಲಿ ಒಟ್ಟು 39 ಅಭ್ಯರ್ಥಿಗಳನ್ನು ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು. ವ್ಯಾಸಂಗದ ಸಮಯದಲ್ಲಿ ಮಾರ್ಗಸೂಚಿಯ ಪ್ರಕಾರ ಪ್ರತಿ ವಿದ್ಯಾರ್ಥಿಗೆ ಪ್ರತಿ ತಿಂಗಳು ರೂ.2,500/- ರಂತೆ ಶಿಷ್ಯವೇತನ ನೀಡಲಾಗುವುದು ಹಾಗೂ ಪುರುಷ ಅಭ್ಯರ್ಥಿಗಳಿಗೆ ಹಣ ಪಾವತಿಸುವ ಆಧಾರದ ಮೇಲೆ ವಸತಿ ನಿಲಯದ ಸೌಲಭ್ಯವನ್ನು ಕಲ್ಪಿಸಲಾಗುವುದು.

ಅಭ್ಯರ್ಥಿಗಳು ಎಸ್‌ಎಸ್‌ಎಲ್‌ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಇಂಗ್ಲಿಷ್ ನ್ನು ಒಂದು ವಿಷಯವಾಗಿ ಅಭ್ಯಸಿಸಿ ಉತ್ತೀರ್ಣರಾಗಿರಬೇಕು.

ದಿನಾಂಕ: 01.07.2026 ಕ್ಕೆ ಅನ್ವಯಿಸುವಂತೆ ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 15 ರಿಂದ 23 ವರ್ಷ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 15 ರಿಂದ 25 ವರ್ಷಗಳ ವಯೋಮಿತಿ ಇರಬೇಕು.

ಲಭ್ಯವಿರುವ ಸಂಸ್ಥೆಗಳು ಮತ್ತು ಸೀಟುಗಳ ವಿವರ:

ಕರ್ನಾಟಕ ಕೈಮಗ್ಗ ತಂತ್ರಜ್ಞಾನ ಸಂಸ್ಥೆ, ಗದಗ-ಬೆಟಗೇರಿ (ಕರ್ನಾಟಕ) – 22 ಸೀಟುಗಳುಭಾರತೀಯ ಕೈಮಗ್ಗ ತಂತ್ರಜ್ಞಾನ ಸಂಸ್ಥೆ, ಸೇಲಂ (ತಮಿಳುನಾಡು) – 12 ಸೀಟುಗಳುಎಸ್.ಪಿ.ಕೆ.ಎಂ. ಭಾರತೀಯ ಕೈಮಗ್ಗ ತಂತ್ರಜ್ಞಾನ ಸಂಸ್ಥೆ, ವೆಂಕಟಗಿರಿ (ಆಂಧ್ರಪ್ರದೇಶ) – 03 ಸೀಟುಗಳುಭಾರತೀಯ ಕೈಮಗ್ಗ ತಂತ್ರಜ್ಞಾನ ಸಂಸ್ಥೆ, ಕಣ್ಣೂರು (ಕೇರಳ) – 02 ಸೀಟುಗಳು ಸೇರಿ ಒಟ್ಟು 39 ಸೀಟುಗಳು ಲಭ್ಯವಿರುತ್ತವೆ.

ಆಸಕ್ತಿ ಇರುವ ಅಭ್ಯರ್ಥಿಗಳು ಅರ್ಜಿ ಫಾರಂಗಳನ್ನು ವೆಬ್‌ಸೈಟ್

https://khtigadag.ac.in/AdmissionForm.pdf

ನಿಂದ ಆನ್‌ಲೈನ್‌ನಲ್ಲಿ ಡೌನ್‌ಲೋಡ್ ಮಾಡಿಕೊಂಡು ಪೂರ್ಣವಾಗಿ ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ ದಾಖಲಾತಿಗಳೊಂದಿಗೆ ದಿನಾಂಕ: 30.05.2026 ರೊಳಗಾಗಿ “ಪ್ರಾಂಶುಪಾಲರು, ಕರ್ನಾಟಕ ಕೈಮಗ್ಗ ತಂತ್ರಜ್ಞಾನ ಸಂಸ್ಥೆ, ನರಸಾಪುರ, ಗದಗ-582102” ಇವರಿಗೆ ಸಲ್ಲಿಸಬೇಕಾಗಿರುತ್ತದೆ.

ಹೆಚ್ಚಿನ ವಿವರಗಳಿಗಾಗಿ ಗದಗ ಸಂಸ್ಥೆಯ ದೂರವಾಣಿ ಸಂಖ್ಯೆ: 9449162822 ಅಥವಾ ಜಂಟಿ/ಉಪ/ಸಹಾಯಕ ನಿರ್ದೇಶಕರು, ಕೈಮಗ್ಗ ಮತ್ತು ಜವಳಿ ಇಲಾಖೆ, ಜಿಲ್ಲಾ ಪಂಚಾಯತ್, ಶಿವಮೊಗ್ಗ , ದೂರವಾಣಿ ಸಂಖ್ಯೆ: 01812-223405 ಇವರನ್ನು ಸಂಪರ್ಕಿಸಬಹುದಾಗಿದೆ ಎಂದು ಕೈಮಗ್ಗ ಮತ್ತು ಜವಳಿ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author