ಶಿವಮೊಗ್ಗ, ನಗರದ ಆರ್‌ಎಂಸಿ ಯಾರ್ಡ್ ಹತ್ತಿರ ಶುಕ್ರವಾರ ರಾತ್ರಿ ಕಾರಿನಲ್ಲಿ ಕ್ರಿಕೆಟ್ ಬೆಟ್ಟಿಂಗ್ ಆಡುತ್ತಿರುವವರನ್ನು ವಿನೋಬನಗರ ಪೊಲೀಸರು ಬಂಧಿಸಿದ್ದಾರೆ.
ಮಾಹಿತಿ ಮೇರೆಗೆ, ಪಿಎಸ್‌ಐ ವಿನೋಬನಗರ ಠಾಣಾ ಸಿಬ್ಬಂದಿಗಳೊಂದಿಗೆ ಸ್ಥಳಕ್ಕೆ ಹೋಗಿ ದಾಳಿ ನಡೆಸಿದರು 5 ಯುವಕರು ಕ್ರಿಕ್ ಲೈನ್ ಗುರು ಎಂಬ ಮೊಬೈಲ್ ಅಪ್ಲಿಕೇಷನ್ ಮುಖಾಂತರ ಆನ್‌ಲೈನ್ ಕ್ರಿಕೆಟ್ ಬೆಟ್ಟಿಂಗ್ ಆಡುತ್ತಿದ್ದರು.
ಆರೋಪಿತರನ್ನು ದಸ್ತಗಿರಿ ಮಾಡಿ, ಅವರಿಂದ 35,000/- ರೂ ನಗದು ಹಣ, 7 ಮೊಬೈಲ್, XUV 300 ಕಾರ್ U/s-112 BNS &U/s 78(1)(a)(vi) KP Act ರೀತ್ಯಾ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

