ಶಿವಮೊಗ್ಗ | ಗೋವುಗಳಿಗೆ ನಿಷ್ಕರುಣೆ ತೋರಿಸುವ ತಿದ್ದುಪಡಿ ಕಾಯ್ದೆ ಬೇಡ : ವಿಎಚ್ ಪಿ ಬಜರಂಗದಳ ಪ್ರತಿಭಟನೆ

ಶಿವಮೊಗ್ಗ

ಶಿವಮೊಗ್ಗ, ಕರ್ನಾಟಕ ಸರ್ಕಾರ ತನ್ನ ಕ್ಯಾಬಿನೆಟ್ ಸಭೆಯಲ್ಲಿ ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಹಾಗೂ ಸಂರಕ್ಷಣಾ ಕಾಯಿದೆ 2020ರ ಸೆಕ್ಷನ್ 8(4)ಕ್ಕೆ ತಿದ್ದುಪಡಿಯನ್ನು ಮಾಡುವ ಬಗ್ಗೆ ನಿರ್ಣಯ ತೆಗೆದುಕೊಂಡಿದೆ ಎಂದು ಮಾಧ್ಯಮದ ಮೂಲಕ ತಿಳಿದು ಬಂದಿದ್ದು.

ಹಾಗಾಗಿ ಇಂದು ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ವಿಶ್ವ ಹಿಂದೂ ಪರಿಷದ್ ಬಜರಂಗದಳ ಶಿವಮೊಗ್ಗ ಜಿಲ್ಲಾ ಪ್ರತಿಭಟನೆಯಲ್ಲಿ ತೀವ್ರವಾಗಿ ವಿರೋಧಿಸಿದೆ.

ತಿದ್ದುಪಡಿ ಮಾಡುವುದನ್ನು ತಕ್ಷಣ ಕೈಬಿಡಬೇಕೆಂದು ಸಂಬಂಧಪಟ್ಟವರೆಲ್ಲರಿಗೂ ತಾವು ತಿಳಿಸಬೇಕೆಂದು ಹಾಗೂ ತಿದ್ದುಪಡಿಯನ್ನು ವಿಧಾನಸಭೆಯಲ್ಲಿ ಮಂಡಿಸದಂತೆ ಕ್ರಮ ಕೈಗೊಳ್ಳಬೇಕಾಗಿ ಆಗ್ರಹಿಸುತಿದ್ದೇವೆ ಎಂದು ಮನವಿ ಮಾಡಿದ್ದಾರೆ.

ರಾಜ್ಯದಲ್ಲಿ ಗೋವುಗಳು ಅತ್ಯಂತ ಹಿಂಸಾತ್ಮಕವಾಗಿ ಒಂದೇ ವಾಹನದಲ್ಲಿ ನಿಗದಿತ ಸಂಖ್ಯೆಗಿಂತ ಹತ್ತಾರು ಪಟ್ಟು ಹೆಚ್ಚು ಜಾನುವಾರುಗಳನ್ನು ಕ್ರೂರವಾಗಿ ಒಂದರ ಮೇಲೊಂದು ಹಾಕಿ ದುಡ್ಡಿನ ಆಸೆಗಾಗಿ ಸಾಗಾಟ ಮಾಡುತ್ತಿರುವುದು ಕಂಡು ಬರುತಿತ್ತು.

ಮೇಲ್ಕಾಣಿಸಿದ ಕಾಯಿದೆ 2021 ರಲ್ಲಿ ಜಾರಿಯಾದ ನಂತರ ಈ ಕ್ರೂರತೆ ಒಂದಷ್ಟು ಕಡಿಮೆ ಆದದ್ದು ಕಂಡುಬಂದಿದೆ. ಆದರೆ ಇನ್ನೂ ಕೂಡ ಕಾಯ್ದೆಯನ್ನು ಪರಿಣಾಮಕಾರಿಯಾಗಿ ಜಾರಿ ಮಾಡದ ಕಾರಣ ಹಲವು ಕಡೆ ಹಣದ ಆಸೆಗಾಗಿ ಕಂಡುಬಂದಿದೆ ಇದನ್ನು ಹಸು ಮಾಲೀಕರು ಕ್ರೂರವಾಗಿ ಜಾನುವಾರುಗಳನ್ನು ಸಾಗಿಸುವುದು ಸುಲಭವಾಗಿ ಸಾಗಾಟ ಮಾಡಲು ಜಾರಿಗೊಳಿಸಬೇಕಾಗಿದೆ.

ಆದರೆ ಇದಕ್ಕೆ ವಿರುದ್ಧವಾಗಿ ಕಟುಕರಿಗೆ ಹಾಗೂ ಅಕ್ರಮ ಗೋ ಕಳ್ಳರಿಗೆ ಅನುಕೂಲವಾಗುವಂತೆ ವಶಪಡಿಸಿದ ಹಸ್ತಾಂತರಕ್ಕೆ ಬ್ಯಾಂಕ್ ಗ್ಯಾರಂಟಿ ಕೊಡುವುದನ್ನು ಕೈ ಬಿಡುವ ಬಗ್ಗೆ ಕಾಯಿದೆಯನ್ನು ತಿದ್ದುಪಡಿ ಮಾಡದಂತೆ ಕ್ರಮ ಕೈಗೊಂಡು ರಾಜ್ಯದಲ್ಲಿ ಕಾನೂನು ರೀತಿಯಲ್ಲಿ ಮಾತ್ರ ಜಾನುವಾರುಗಳನ್ನ ಸಾಗಾಟ ಮಾಡುವಂತೆ ಕಾನೂನು ಜಾಗೃತಿ ಮಾಡಬೇಕು ಎಂದು ಸಂಘಟನೆ ತಿಳಿಸಿದೆ.

ಈ ಕಾಯಿದೆ ಕೇವಲ ಜಾನುವಾರು ವದೆ ನಿಷೇಧಿಸುವ ಉದ್ದೇಶ ಮಾತ್ರವಲ್ಲದೆ ಸಂರಕ್ಷಣಾ ಕಾಯಿದೆಯೂ ಆಗಿರುತ್ತದೆ ಎಂದಿದೆ. ಅಂದರೆ ಮುಖ್ಯವಾಗಿ ಸಾಗಾಟದ ಸಮಯದಲ್ಲಿ ಜಾನುವಾರುಗಳಿಗೆ ವಾಹನದ ಮಾಲಕರು ಮಾಡುವ ಕ್ರೂರ ಸಾಗಾಟ ನಿಲ್ಲಿಸಿ ಸಾಗಾಟದಲಿ ಜಾನುವಾರುಗಳಿಗೆ ಆಗಬಹುದಾದಂತ ಹಿಂಸೆ, ಗಾಯಗಳಿಂದ ಸಂರಕ್ಷಣೆ ಮಾಡುವ ಉದ್ದೇಶವನ್ನು ಹೊಂದಿದ್ದು ಅದಕ್ಕಾಗಿ ಜಾನುವಾರು ಸಾಗಾಟ ನಿಯಮಾವಳಿಗಳನ್ನು ವಾಹನ ಮಾಲಕರೆ ಪರಿಣಾಮಕಾರಿಯಾಗಿ ಜಾರಿಗೊಳಿಸಲು ಮನೋಬಾವ ಸೃಷ್ಟಿಯಾಗಲು ಬಿಗಿಯಾದಂತ ಕಾನೂನು ರಚಿಸಲಾಗಿತ್ತು.

ಈಗ ಕಾನೂನು ದುರ್ಬಲಗೊಳಿಸುವ ಮೂಲಕ ವಾಹನ ಸಾಗಾಟಗಾರರಿಗೆ, ಗೋ ಹಂತಕರಿಗೆ “ನೀವು ಹೇಗೆ ಬೇಕಾದರೂ ಸಾಗಾಟ ಮಾಡಬಹುದು ನಾವು ನಿಮ್ಮ ಜೊತೆಗಿದ್ದೇವೆ” ಎಂದು ಕಾಂಗ್ರೆಸ್ ಸರ್ಕಾರವು ಅವರಿಗೆ ನಿರ್ಭಯವನ್ನು ಕೊಟ್ಟಂತಾಗಿದೆ.

ತನ್ಮೂಲಕ ಗೋವುಗುಗಳಿಗೆ ಹಿಂಸೆ ಹಾಗೂ ಅವುಗಳ ಹತ್ಯೆ ಇನ್ನು ಮುಂದೆ ಹೆಚ್ಚಾಗಲಿದೆ. ಇದು ಹಿಂದುಗಳಿಗೆ ಪೂಜನೀಯವಾಗಿರತಕ್ಕಂತಹ ಗೋವುಗಳಿಗೆ ನೋವು, ಹಿಂಸೆ ಮಾಡಲು ಕಾಂಗ್ರೆಸ್ ಸರ್ಕಾರ ಅನುಕೂಲ ಮಾಡಿಕೊಟ್ಟಂತಾಗಿದ್ದು, ಇದರಿಂದಾಗಿ ಹಿಂದುಗಳ ಆಕ್ರೋಶ ಹೆಚ್ಚಾಗಿ ರಾಜ್ಯದಲ್ಲಿ ಅಶಾಂತಿ ಅರಾಜಕತೆಗೆ ಕಾರಣವಾಗಬಹುದು ಎಂದಿದೆ.

ಗೋಕಳ್ಳ ಸಾಗಾಟಗಾರರಿಗೆ ಈ ತಿದ್ದುಪಡಿಯಿಂದ ನಿರ್ಭಯತ್ವ ಕೊಟ್ಟಂತಾಗಿರುವುದು ಸಂವಿಧಾನ ವಿರೋಧಿಯಾಗಿದೆ. ಸಂವಿಧಾನದ ಆರ್ಟಿಕಲ್ 51ಎ ಇದರ ಪ್ರಕಾರ ಜೀವಿಗಳಿಗೆ ಕರುಣೆ ತೋರಿಸುವುದು ಪ್ರತಿಯೊಬ್ಬ ಭಾರತೀಯನ ಮೂಲಭೂತ ಕರ್ತವ್ಯವಾಗಿದೆ. ಇದು ಕರ್ನಾಟಕ ಸರ್ಕಾರಕ್ಕೂ ಅನ್ವಯವಾಗುತ್ತದೆ. ತಿದ್ದುಪಡಿ ಸಂವಿಧಾನದ ಈ ಆಶಯಕ್ಕೆ ವಿರುದ್ಧವಾಗಿದೆ. ಇದು ಜೀವಿಗಳಿಗೆ ನಿಷ್ಕರುಣೆ ತೋರಿಸುವ ತಿದ್ದುಪಡಿಯಾಗಿದೆ. ಇದು ಸಂವಿಧಾನ ವಿರೋಧಿಯಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಆದ್ದರಿಂದ ಸಂವಿಧಾನದ ರಕ್ಷಣೆಗಾಗಿ ತಮ್ಮ ಘನ ಹುದ್ದೆಯನ್ನು ಯತೋಚಿತವಾಗಿ ಬಳಸಿ ಈ ತಿದ್ದುಪಡಿಯನ್ನು ವಿಧಾನಸಭೆಯಲ್ಲಿ ಮಂಡಿಸದಂತೆ ಕ್ರಮ ಕೈಗೊಳ್ಳಬೇಕು ಎಂದು ಹಿಂದೂ ಸಮಾಜದ ಪರವಾಗಿ ಅಗ್ರಹಿಸುತಿದ್ದೇವೆ ಎಂದಿದ್ದಾರೆ.

ಈ ಪ್ರತಿಭಟನೆಯಲ್ಲಿ ವಾಸುದೇವ ಜಿಲ್ಲಾಧ್ಯಕ್ಷರು, ರಾಜೇಶ್ ಗೌಡ ಪ್ರಾಂತ್ಯ ಸುರಕ್ಷಾ ಪ್ರಮುಖ್, ಅಂಕುಶ್ ಜಿಲ್ಲಾ ಸಹ ಸಂಯೋಜಕರು, ಸುರೇಶ್‌ಬಾಬು ಜಿಲ್ಲಾ ಸಹ ಸಂಯೋಜಕರು, ಜಿತೇಂದ್ರ ಜಿಲ್ಲಾ ಧರ್ಮಪ್ರಸಾರ ಪ್ರಮುಖ್ ಹಾಗೂ ಅನೇಕರು ಉಪಸ್ಥಿತರಿದ್ದರು.

Author