ಬೈಂದೂರು ವಿಧಾನಸಭಾ ಕ್ಷೇತ್ರದ ತೊಂಡ್ಲೆ ಸಂಪರ್ಕ ಸೇತುವೆ ನಿರ್ಮಾಣಕ್ಕಾಗಿ ಒಟ್ಟು ರೂ. 1.00 ಕೋಟಿ ಅನುದಾನ ಮಂಜೂರಾಗಿದ್ದು, ಇಂದು ಸದರಿ ಮಹತ್ವದ ಕಾಮಗಾರಿಯ ಭೂಮಿ ಪೂಜೆ ನೆರವೇರಿಸಿ ಚಾಲನೆ ನೀಡಲಾಯಿತು.

ಕ್ಷೇತ್ರದ ಶಾಸಕರಾದ ಗುರುರಾಜ್ ಗಂಟಿಹೊಳೆ ಅವರ ಸಮ್ಮುಖದಲ್ಲಿ ಹಾಗೂ ಸ್ಥಳೀಯ ಗ್ರಾಮಸ್ಥರ ಸಮ್ಮುಖದಲ್ಲಿ ಈ ಕಾರ್ಯಕ್ರಮ ಜರುಗಿತು.

ಈ ನೂತನ ಸೇತುವೆಯು ಸುತ್ತಮುತ್ತಲಿನ ಹಳ್ಳಿಗಳ ಜನರಿಗೆ ಸುಗಮ ಹಾಗೂ ಸುರಕ್ಷಿತ ಸಂಚಾರ ಕಲ್ಪಿಸುವಲ್ಲಿ ಪ್ರಮುಖ ಪಾತ್ರ ವಹಿಸಲಿದೆಗ್ರಾಮೀಣ ಭಾಗದ ಮೂಲಸೌಕರ್ಯಗಳನ್ನು ಬಲಪಡಿಸಿ, ಪ್ರತಿಯೊಬ್ಬ ನಾಗರಿಕರಿಗೂ ಉತ್ತಮ ಸಂಪರ್ಕ ವ್ಯವಸ್ಥೆ ಕಲ್ಪಿಸುವುದೇ ನಮ್ಮ ಪ್ರಮುಖ ಆದ್ಯತೆಯಾಗಿದೆ ಎಂದು ಸಂಸದರು ತಿಳಿಸಿದ್ದಾರೆ.

