ಶಿವಮೊಗ್ಗ ದೊಡ್ಡಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯ ಹೊಸಮನೆ ಪ್ರದೇಶದಲ್ಲಿರುವ ಮನೆಯೊಂದರಲ್ಲಿ ಅಕ್ರಮವಾಗಿ ಅಂದರ್-ಬಾಹಾರ್ ಇಸ್ಟೀಟ್ ಜೂಜಾಟ ನಡೆಸಲಾಗುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿ 9 ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ.
ಪೊಲೀಸ್ ಉಪಾಧೀಕ್ಷಕರು, ಶಿವಮೊಗ್ಗ ಎ-ಉಪವಿಭಾಗ ಅವರಿಂದ ಸರ್ಚ್ ವಾರೆಂಟ್ ಪಡೆದು, ದೊಡ್ಡಪೇಟೆ ಪೊಲೀಸ್ ಠಾಣೆಯ ಪಿಐ ನೇತೃತ್ವದ ತಂಡ ದಾಳಿ ನಡೆಸಿತು. ಕಾರ್ಯಾಚರಣೆಯಲ್ಲಿ ಜೂಜಾಟಕ್ಕೆ ಬಳಸಲಾಗಿದ್ದ ₹33,470 ನಗದು, 8 ಮೊಬೈಲ್ ಫೋನ್ಗಳು ಹಾಗೂ ಇಸ್ಟೀಟ್ ಕಾರ್ಡ್ಗಳನ್ನು ವಶಪಡಿಸಿಕೊಳ್ಳಲಾಗಿದೆ.
ಈ ಸಂಬಂಧ ಆರೋಪಿತರ ವಿರುದ್ಧ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಗುನ್ನೆ ಸಂಖ್ಯೆ 200/2026ರಡಿ ಕರ್ನಾಟಕ ಪೊಲೀಸ್ ಕಾಯ್ದೆಯ ಕಲಂ 79 ಮತ್ತು 80ರ ಅನ್ವಯ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

