ಶಿವಮೊಗ್ಗ | ಬೀದಿ ದೀಪಗಳ ನಿರ್ವಹಣೆಯಲ್ಲಿ ನಿರ್ಲಕ್ಷ್ಯ ವಹಿಸಿದರೆ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ : ಶಾಸಕ ಎಸ್.ಎನ್. ಚನ್ನಬಸಪ್ಪ

ರಾತ್ರಿ ವೇಳೆಯಲ್ಲಿ ಕತ್ತಲೆಯ ವಾತಾವರಣದಿಂದಾಗಿ ಸಾರ್ವಜನಿಕರು, ವಿಶೇಷವಾಗಿ ಮಹಿಳೆಯರು ಮತ್ತು ಹಿರಿಯ ನಾಗರಿಕರು ಓಡಾಡಲು ತೊಂದರೆ ಅನುಭವಿಸುತ್ತಿದ್ದಾರೆ. ಆದ್ದರಿಂದ ಅಧಿಕಾರಿಗಳು ತಮ್ಮ ಕಚೇರಿ ವ್ಯಾಪ್ತಿಯಲ್ಲಿ ಕಟ್ಟುನಿಟ್ಟಾಗಿ ಮತ್ತು ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಿ, ಎಲ್ಲಾ ಬೀದಿ ದೀಪಗಳು ಕಾರ್ಯನಿರ್ವಹಿಸುವಂತೆ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಆದೇಶಿಸಿದರು.