​ನೂತನ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಅವರಿಗೆ ಶಾಸಕ ಎಸ್.ಎನ್. ಚನ್ನಬಸಪ್ಪ ಅವರಿಂದ ಹಾರ್ದಿಕ ಅಭಿನಂದನೆ​

ರಾಜಕೀಯ

ಬೆಂಗಳೂರು/ಶಿವಮೊಗ್ಗ, ಕರ್ನಾಟಕ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಶ್ರೀ ಡಿ.ಕೆ. ಶಿವಕುಮಾರ್ ಹಾಗೂ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಡಾ. ಜಿ. ಪರಮೇಶ್ವರ್ ಅವರಿಗೆ ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎಸ್.ಎನ್. ಚನ್ನಬಸಪ್ಪ (ಚೆನ್ನಿ) ಅವರು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಮಿತಿಯ ಸಭೆಯ ನಿಮಿತ್ತ ನಿನ್ನೆ ಸಂಜೆ ಬೆಂಗಳೂರಿನ ವಿಧಾನಸೌಧಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ, ಮಾನ್ಯ ಶಾಸಕರು ಗೌರವಾನ್ವಿತ ಮುಖ್ಯಮಂತ್ರಿಗಳು ಹಾಗೂ ಉಪಮುಖ್ಯಮಂತ್ರಿಗಳನ್ನು ಭೇಟಿಯಾಗಿ ಹಾರ್ದಿಕ ಶುಭ ಹಾರೈಕೆಗಳನ್ನು ಸಲ್ಲಿಸಿದರು.​​

ಈ ಸಂದರ್ಭದಲ್ಲಿ ಮಾಧ್ಯಮಗಳಿಗೆ ಪ್ರಕಟಣೆ ನೀಡಿರುವ ಶಾಸಕ ಎಸ್.ಎನ್. ಚನ್ನಬಸಪ್ಪ ಅವರು, “ನೂತನ ಮುಖ್ಯಮಂತ್ರಿಗಳು ಹಾಗೂ ಉಪಮುಖ್ಯಮಂತ್ರಿಗಳ ಸುದೀರ್ಘ ಸಾರ್ವಜನಿಕ ಮತ್ತು ರಾಜಕೀಯ ಅನುಭವದ ಸಾರಥ್ಯದಲ್ಲಿ, ಮುಂಬರುವ ದಿನಗಳಲ್ಲಿ ನಮ್ಮ ಕರ್ನಾಟಕ ರಾಜ್ಯವು ಪ್ರಗತಿಯ ಪಥದಲ್ಲಿ ಮುನ್ನಡೆಯಲಿ ಎಂದು ಆಶಿಸುತ್ತೇನೆ.

ಇದರೊಂದಿಗೆ, ಮಲೆನಾಡಿನ ಹೆಬ್ಬಾಗಿಲಾದ ಶಿವಮೊಗ್ಗ ನಗರದ ಜ್ವಲಂತ ಅಗತ್ಯತೆಗಳು ಹಾಗೂ ನಾಡಿನ ಸಮಸ್ತ ನಾಗರಿಕರ ಸರ್ವತೋಮುಖ ಕಲ್ಯಾಣಕ್ಕಾಗಿ, ಯಾವುದೇ ತಾರತಮ್ಯವಿಲ್ಲದ ಸಮಾನತೆಯ ಮತ್ತು ಪಾರದರ್ಶಕ ಶುದ್ಧ ಆಡಳಿತ ತತ್ತ್ವಗಳ ಅಡಿಯಲ್ಲಿ ತಾವೊಂದು ಹೊಸ ಭರವಸೆಯ ಮುನ್ನುಡಿ ಬರೆಯುವಿರೆಂದು ಬಯಸುತ್ತೇನೆ,” ಎಂದು ತಿಳಿಸಿ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

Author