ಬಿಜೆಪಿ ಶಿವಮೊಗ್ಗ ನಗರ ಮಹಿಳಾ ಮೋರ್ಚಾ ವತಿಯಿಂದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು “ತಾಯಿಯ ಹೆಸರಿನಲ್ಲಿ ಒಂದು ಮರ” ಅಭಿಯಾನದ ಕರೆಯ ಅಂಗವಾಗಿ, ಇಂದು ಶಿವಮೊಗ್ಗದ ಸರ್ಕಾರಿ ಪ್ರೌಢಶಾಲೆಯಲ್ಲಿ ಅವರು ಸಸಿ ನೆಡುವ ಮೂಲಕ ವಿಶ್ವ ಪರಿಸರ ದಿನವನ್ನು ಅರ್ಥಪೂರ್ಣವಾಗಿ ಆಚರಿಸಿದರು.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಜೀ ಅವರು ಸಾರ್ವಜನಿಕ ಜೀವನದ 12 ಸಾರ್ಥಕ ವರ್ಷಗಳನ್ನು ಪೂರೈಸುತ್ತಿರುವ ಈ ಸಂದರ್ಭದಲ್ಲಿ, ರಾಜ್ಯದ 224 ವಿಧಾನಸಭಾ ಕ್ಷೇತ್ರಗಳ ಪ್ರತಿಯೊಂದು ಬೂತ್ ಮಟ್ಟದಲ್ಲಿಯೂ ಪಕ್ಷದ ಕಾರ್ಯಕರ್ತರು, ಪ್ರಮುಖರು ಹಾಗೂ ಕೇಂದ್ರ ಸರ್ಕಾರದ ಯೋಜನೆಗಳ ಫಲಾನುಭವಿ ನಾಗರಿಕರೊಂದಿಗೆ ಸೇರಿ ವಿಶ್ವ ಪರಿಸರ ದಿನವನ್ನು ಆಚರಿಸುತ್ತಿದ್ದಾರೆ.
ಹಸಿರು ಪರಿಸರ ನಿರ್ಮಾಣ, ಪ್ರಕೃತಿ ಸಂರಕ್ಷಣೆ ಹಾಗೂ ಮುಂದಿನ ಪೀಳಿಗೆಗೆ ಉತ್ತಮ ಭವಿಷ್ಯ ರೂಪಿಸುವ ಸಂಕಲ್ಪದೊಂದಿಗೆ ಸಸಿ ನೆಡುವ ಕಾರ್ಯದಲ್ಲಿ ಭಾಗವಹಿಸಿದ್ದರು.

ಈ ಸಂದರ್ಭದಲ್ಲಿ ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎಸ್ ಎನ್ ಚನ್ನಬಸಪ್ಪ ಅವರು, ವಿಧಾನ ಪರಿಷತ್ ಶಾಸಕರಾದ ಡಿ ಎಸ್ ಅರುಣ್, ರಾಜ್ಯ ಪ್ರಕೋಸ್ಟಗಳ ಸಂಚಾಲಕರಾದ ದತ್ತಾತ್ರಿ ನಗರ ಮಹಿಳಾ ಮೋರ್ಚಾ ಅಧ್ಯಕ್ಷರು ರಶ್ಮಿ, ಸೂಡಾ ಮಾಜಿ ಅಧ್ಯಕ್ಷರಾದ ನಾಗರಾಜ್, ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿಗಳಾದ ಮಂಜುನಾಥ್, ಮಾಜಿ ಕಾರ್ಪೊರೇಟರ್ ಪ್ರಭಾಕರ್, ಬಿಜೆಪಿ ನಗರ ಪರಭಾರಿಗಳಾದ ಕುಪೇಂದ್ರ,ರೈತ ಮೋರ್ಚಾ ಪದಾಧಿಕಾರಿಗಳು, ಮಹಿಳಾ ಮೋರ್ಚಾ ಪದಾಧಿಕಾರಿಗಳು ಉಪಸ್ಥಿತರಿದ್ದರು.

