ಶಿವಮೊಗ್ಗ, ಇಲ್ಲಿನ ಮಾಚೇನಹಳ್ಳಿಯ ನಿದಿಗೆ ಕೈಗಾರಿಕಾ ಪ್ರದೇಶದಲ್ಲಿರುವ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ (ಜಿ.ಟಿ.ಟಿ.ಸಿ) ಸಂಸ್ಥೆಯಲ್ಲಿ 2026-27ನೇ ಸಾಲಿನ ಡಿಪ್ಲೋಮಾ ಕೋರ್ಸ್ಗಳ ಉಳಿಕೆ ಸೀಟುಗಳ ಭರ್ತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಸಂಸ್ಥೆಯಲ್ಲಿ ಲಭ್ಯವಿರುವ ಡಿಪ್ಲೋಮಾ ಇನ್ ಟೂಲ್ & ಡೈ ಮೇಕಿಂಗ್ (ಡಿಟಿಡಿಎಂ, ಡಿಪ್ಲೋಮಾ ಇನ್ ಮೆಕಾಟ್ರಾನಿಕ್ಸ್ (ಡಿಎಂಸಿಹೆಚ್) ಹಾಗೂ ಡಿಪ್ಲೋಮಾ ಇನ್ ಪ್ರಿಸಿಷನ್ ಮ್ಯಾನುಫ್ಯಾಕ್ಟರಿಂಗ್ (ಡಿಪಿಎಂ) ಕೋರ್ಸ್ಗಳ ಪ್ರವೇಶಾತಿಗೆ ಎಸ್ಎಸ್ಎಲ್ಸಿ ತೇರ್ಗಡೆಯಾದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಈ ಕೋರ್ಸ್ಗಳು 3 ವರ್ಷದ ವ್ಯಾಸಂಗ ಹಾಗೂ 1 ವರ್ಷದ ಕಡ್ಡಾಯ ಕೈಗಾರಿಕಾ ತರಬೇತಿಯನ್ನು ಒಳಗೊಂಡಿರುತ್ತವೆ.ಉಳಿಕೆ ಸೀಟುಗಳನ್ನು “ಮೊದಲು ಬಂದವರಿಗೆ ಮೊದಲ ಆದ್ಯತೆ” ಮೇರೆಗೆ ಹಂಚಿಕೆ ಮಾಡಲಾಗುವುದು.
ಆಸಕ್ತ ವಿದ್ಯಾರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆಗಳಾದ 9448307027, 9880141054, 9449286543 ಅಥವಾ ದೂರವಾಣಿ ಸಂಖ್ಯೆ 08182-246054 ಅನ್ನು ಸಂಪರ್ಕಿಸಬಹುದು ಎಂದು ಎಂದು ಸಂಸ್ಥೆಯ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

