ಬೆಂಗಳೂರು, ಎಐಸಿಸಿ ಕಾರ್ಯದರ್ಶಿ ಹಾಗೂ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಉಪಾಧ್ಯಕ್ಷ, ದಿವಂಗತ ದೇವರಾಜ ಅರಸು ಅವರ ಮೊಮ್ಮಗರೂ ಆದ ಸೂರಜ್ ಹೆಗ್ಡೆ ಅವರು ಭಾನುವಾರ ರಾತ್ರಿ ಹಠಾತ್ ಹೃದಯಸ್ತಂಭನದಿಂದ ನಿಧನರಾಗಿದ್ದಾರೆ.
ಭಾನುವಾರ ಸೂರಜ್ (55) ಅವರಿಗೆ ಹಠಾತ್ ಹೃದಯ ಸಮಸ್ಯೆ ಕಾಣಿಸಿಕೊಂಡಿದ್ದು ಕೂಡಲೇ ಎಂ.ಎಸ್.ರಾಮಯ್ಯ ಆಸ್ಪತ್ರೆಗೆ ದಾಖಲಿಸಿದರೂ ಫಲಕಾರಿಯಾಗಲಿಲ್ಲ ಎಂದು ತಿಳಿದುಬಂದಿದೆ. ಸುಮಾರು ಸೂರಜ್ ವಿದ್ಯಾರ್ಥಿ ಕಾಂಗ್ರೆಸ್, ಯುವ ಕಾಂಗ್ರೆಸ್, ರಾಜ್ಯ ಹಾಗೂ ರಾಷ್ಟ್ರೀಯ ಕಾಂಗ್ರೆಸ್ಸಿನಲ್ಲಿ ಹಲವು ಜವಾಬ್ದಾರಿ ನಿಭಾಯಿಸಿದ್ದರು.


