ಶಿವಮೊಗ್ಗ | ಶಾಲಾ, ಕಾಲೇಜು ವಾಹನಗಳ ತಪಾಸಣೆ ; ಮದ್ಯ ಸೇವಿಸಿ ವಾಹನ ಚಾಲನೆ ಮಾಡುತ್ತಿದ್ದ ನಾಲ್ವರು ಚಾಲಕರ ವಿರುದ್ಧ ಪ್ರಕರಣ ದಾಖಲು

ಶಿವಮೊಗ್ಗ

ಶಿವಮೊಗ್ಗ, ಸಿಪಿಐ ದೇವರಾಜ್ ನೇತೃತ್ವದಲ್ಲಿ ಸಂಚಾರ ಠಾಣೆ ಪೊಲೀಸರು ಇಂದು ಬೆಳಗ್ಗೆ ನಗರದಾದ್ಯಂತ ಶಾಲಾ, ಕಾಲೇಜು ವಾಹನಗಳ ದಿಢೀರ್‌ ತಪಾಸಣೆ ಕಾರ್ಯಾಚರಣೆ ನಡೆಸಿದರು.

ಶಿವಮೊಗ್ಗ ನಗರದ ಪ್ರಮುಖ ಸ್ಥಳಗಳಲ್ಲಿ ಸಂಚಾರ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿದರು. ಶಾಲೆ, ಕಾಲೇಜುಗಳಿಗೆ ವಿದ್ಯಾರ್ಥಿಗಳನ್ನು ಕರೆದೊಯ್ಯುತ್ತಿದ್ದ ವಾಹನಗಳು, ಬಸ್ಸುಗಳನ್ನು ತಡೆದು ತಪಾಸಣೆ ನಡೆಸಿದರು. ಚಾಲಕರು ಮದ್ಯ ಸೇವನೆ ಮಾಡಿರುವ ಕುರಿತು ಪರಿಶೀಲಿಸಿದರು

ಈ ವೇಳೆ ಮದ್ಯ ಸೇವಿಸಿ ವಾಹನ ಚಾಲನೆ ಮಾಡುತ್ತಿದ್ದ 4 ಚಾಲಕರ ವಿರುದ್ಧ ಡ್ರಂಕ್ ಅಂಡ್ ಡ್ರೈವ್ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇದೇ ವೇಳೆ ಶಾಲಾ ವಾಹನದ ವಿಮೆ, ಎಮಿಷನ್ ರಿಪೋರ್ಟ್ ಹಾಗೂ ಫಿಟ್‌ನೆಸ್ ಸರ್ಟಿಫಿಕೇಟ್ ಅನ್ನು ಕಡ್ಡಾಯವಾಗಿ ಚಾಲ್ತಿಯಲ್ಲಿ ಇಟ್ಟುಕೊಳ್ಳುವಂತೆ ಸೂಚಿಸಿದರು. ಅಲ್ಲದೆ ವಾಹನಗಳ ಸುಸ್ಥಿತಿಯ ಕುರಿತು ಪರಿಶೀಲನೆ ನಡೆಸಿದರು.

Author