ಬೆಂಗಳೂರು,ಸೂರಜ್ ಹೆಗಡೆ ನಿಧಾನಕ್ಕೆ ಮಾಜಿ ಸಚಿವ ಮಧು ಬಂಗಾರಪ್ಪ ತೀವ್ರ ಸಂತಾಪ ಸೂಚಿಸಿದ್ದಾರೆ.
ಆತ್ಮೀಯ ಸ್ನೇಹಿತ, ಅಖಿಲ ಭಾರತ ಕಾಂಗ್ರೆಸ್ ಸಮಿತಿ (AICC) ಕಾರ್ಯದರ್ಶಿ ಹಾಗೂ ರಾಜ್ಯ ಗ್ಯಾರಂಟಿ ಅನುಷ್ಠಾನ ಸಮಿತಿಯ ಉಪಾಧ್ಯಕ್ಷರಾಗಿದ್ದ ಸೂರಜ್ ಹೆಗ್ಡೆ ಅವರ ಹಠಾತ್ ನಿಧನದ ಸುದ್ದಿ ತಿಳಿದು ತೀವ್ರ ಆಘಾತ ಮತ್ತು ದುಃಖವಾಗಿದೆ ಎಂದು ಮಾಜಿ ಸಚಿವ ಎಸ್, ಮಧು ಬಂಗಾರಪ್ಪ ತೀವ್ರ ಸಂತಾಪ ಸೂಚಿಸಿದ್ದಾರೆ.
ಸರಳ ವ್ಯಕ್ತಿತ್ವ, ಸಮರ್ಥ ನಾಯಕತ್ವ ಮತ್ತು ಪಕ್ಷದ ಸಂಘಟನೆಗಾಗಿ ಸದಾ ಶ್ರಮಿಸುತ್ತಿದ್ದ ಅವರು ಜನಸೇವೆಯ ಬಗ್ಗೆ ಅಪಾರ ಬದ್ಧತೆ ಮತ್ತು ಕಾಳಜಿಯನ್ನು ಹೊಂದಿದ್ದರು. ಅವರ ಕಾರ್ಯನಿಷ್ಠೆ ಹಾಗೂ ಜನಪರ ಚಿಂತನೆ ನಮ್ಮೆಲ್ಲರ ಮನದಲ್ಲಿ ಸದಾ ಹಸಿರಾಗಿರಲಿದೆ.
ಭಗವಂತನು ಮೃತರ ಆತ್ಮಕ್ಕೆ ಚಿರಶಾಂತಿಯನ್ನು ನೀಡಲಿ. ಅವರ ಅಗಲಿಕೆಯ ದುಃಖವನ್ನು ಭರಿಸುವ ಶಕ್ತಿಯನ್ನು ಅವರ ಕುಟುಂಬ ವರ್ಗದವರಿಗೆ, ಸ್ನೇಹಿತರಿಗೆ ಮತ್ತು ಅಭಿಮಾನಿಗಳಿಗೆ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ.
ಈ ದುಃಖದ ಸಂದರ್ಭದಲ್ಲಿ ಅವರ ಕುಟುಂಬದ ನೋವಿನಲ್ಲಿ ನಾನು ಸಹ ಭಾಗಿಯಾಗಿದ್ದೇನೆ ಎಂದು ತಿಳಿಸಿದ್ದಾರೆ.


