ಶಿಕಾರಿಪುರ | KSRTC ಬಸ್ನಲ್ಲಿ ಲಕ್ಷಾಂತರ ರೂಪಾಯಿ ಆಭರಣ ಕಳ್ಳತನ ಪ್ರಕರಣ ಮಹಿಳೆ ಸೇರಿ ಇಬ್ಬರು ಸೆರೆ
ಈ ಕುರಿತು ಆರೋಪಿಗಳ ಪತ್ತೆಗೆ ವಿಶೇಷ ತಂಡವನ್ನು ರಚಿಸಲಾಗಿತ್ತು. ಶಿಕಾರಿಪುರ ಉಪ-ವಿಭಾಗದ ಡಿವೈಎಸ್ಪಿ ಕೇಶವ ಕೆ.ಇ ಹಾಗೂ ಶಿಕಾರಿಪುರ ನಗರ ವೃತ್ತದ ಸಿಪಿಐ ಸಂತೋಷ್ ಎಂ ಪಾಟೀಲ್ ಅವರ ನೇತೃತ್ವದ ತಂಡವು ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ.ಬಂಧಿತ ಆರೋಪಿಗಳನ್ನು ವೆಂಕಟೇಶ (35 ವರ್ಷ) ಮತ್ತು ಹೊಸಮನೆಯ ಮಂಜುಳಾ ಸಿ (42 ವರ್ಷ) ಎಂದು ಗುರುತಿಸಲಾಗಿದೆ. ಬಂಧಿತರಿಂದ ಕಳವು ಮಾಡಲಾಗಿದ್ದ ಒಡವೆಗಳನ್ನು ರಿಕವರಿ ಮಾಡಲಾಗಿದ್ದು, ಇಬ್ಬರನ್ನೂ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
Copy and paste this URL into your WordPress site to embed
Copy and paste this code into your site to embed