ಸ್ಪಾಗಳ ಅನೈತಿಕ ಚಟುವಟಿಕೆಗೆ ಬ್ರೇಕ್ ; ಶೀಘ್ರದಲ್ಲಿ ಪ್ರತ್ಯೇಕ ಕಾನೂನು ಜಾರಿ

ಆಯೋಗ ದೇಶ-ವಿದೇಶಗಳ ಕಾನೂನು ಮಾದರಿಗಳನ್ನು ಅಧ್ಯಯನ ನಡೆಸಿದೆ. ಸಿಂಗಾಪುರ, ಅಮೆರಿಕದ ಹಲವು ರಾಜ್ಯಗಳು ಹಾಗೂ ಫಿಲಿಪೈನ್ಸ್‌ನಲ್ಲಿ ಜಾರಿಯಲ್ಲಿರುವ ನಿಯಮಾವಳಿಗಳನ್ನು ಪರಿಶೀಲಿಸಿದೆ. ಕಾನೂನು ಆಯೋಗ 2024ರ ಕಾಯ್ದೆಯೊಂದಕ್ಕೆ ತಿದ್ದುಪಡಿ ತಂದು ಕಡ್ಡಾಯ ಪರವಾನಗಿ ವ್ಯವಸ್ಥೆ ಜಾರಿಗೆ ಶಿಫಾರಸು ಮಾಡಿದೆ. ಪರವಾನಗಿ ಷರತ್ತುಗಳನ್ನು ಉಲ್ಲಂಘಿಸಿದರೆ 10 ಸಾವಿರ ರೂ. ವರೆಗೆ ದಂಡ ಹಾಗೂ ಮರು ಉಲ್ಲಂಘನೆಯಾದರೆ ಪರವಾನಗಿ ರದ್ದುಪಡಿಸುವ ಅಧಿಕಾರವನ್ನು ಸ್ಥಳೀಯ ಆಡಳಿತಕ್ಕೆ ನೀಡುವಂತೆ ಸಲಹೆ ನೀಡಲಾಗಿದೆ.