ಶಿವಮೊಗ್ಗ | ದೇಶದ ಸರ್ವತೋಮುಖ ಅಭಿವೃದ್ಧಿಗಾಗಿ ಪ್ರಧಾನಿ ನರೇಂದ್ರ ಮೋದಿ ಹೆಸರಲ್ಲಿ ವಿಶೇಷ ಪೂಜೆ

ಶಿವಮೊಗ್ಗ

ಶಿವಮೊಗ್ಗ,ಅತ್ಯಂತ ದೀರ್ಘಾವಧಿ ಸೇವೆ ಸಲ್ಲಿಸಿದ ಜನಸೇವೆಯಲ್ಲಿ 4399 ದಿನಗಳ ಐತಿಹಾಸಿಕ ಸಾಧನೆ ಮಾಡಿದ ಪ್ರಧಾನಸೇವಕ ಚುನಾಯಿತ ಪ್ರಧಾನಮಂತ್ರಿಯಾಗಿ ಹೊಸ ದಾಖಲೆ ನಿರ್ಮಿಸಿರುವ ಆದರಣೀಯ ಪ್ರಧಾನಿ ಸನ್ಮಾನ್ಯ ಶ್ರೀ ನರೇಂದ್ರ ಮೋದಿ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು.

ಈ ಸಂತಸದ ಸಂದರ್ಭದಲ್ಲಿ ಶಿವಮೊಗ್ಗದ ರವೀಂದ್ರನಗರ ಗಣಪತಿ ದೇವಸ್ಥಾನದಲ್ಲಿ ಆಯೋಜಿಸಲಾಗಿದ್ದ ವಿಶೇಷ ಪೂಜೆಯಲ್ಲಿ ವಿಧಾನ ಪರಿಷತ್ ಶಾಸಕರು ಹಾಗೂ ರಾಜ್ಯ ಬಿಜೆಪಿ ಕಾರ್ಯದರ್ಶಿಗಳಾದ ಶ್ರೀ ಡಿ.ಎಸ್. ಅರುಣ್ ಅವರು ಭಾಗವಹಿಸಿ, ಪ್ರಧಾನಮಂತ್ರಿಗಳ ಯಶಸ್ವಿ ನಾಯಕತ್ವ ಹಾಗೂ ದೇಶದ ಸರ್ವತೋಮುಖ ಅಭಿವೃದ್ಧಿಗಾಗಿ ಪ್ರಾರ್ಥಿಸಿದರು.

ಈ ಸಂದರ್ಭದಲ್ಲಿ ಸೂಡಾ ಮಾಜಿ ಅಧ್ಯಕ್ಷರು ಹಾಗೂ ಜಿಲ್ಲಾ ಬಿಜೆಪಿ ವಕ್ತಾರರಾದ ಜ್ಯೋತಿ ಪ್ರಕಾಶ್, ಸೂಡಾ ಮಾಜಿ ಅಧ್ಯಕ್ಷರಾದ ನಾಗರಾಜ್, ಮಹಾಶಕ್ತಿ ಕೇಂದ್ರ ಪ್ರಧಾನ ಕಾರ್ಯದರ್ಶಿ ಎಸ್.ಪಿ. ದಿನೇಶ್, ಗಣೇಶ್, ಸಂಜಯ್, ಧೂಪ ಗಣೇಶ, ಸತೀಶ್, ರಮೇಶ್ ಹಾಗೂ ಪಕ್ಷದ ಮುಖಂಡರು ಉಪಸ್ಥಿತರಿದ್ದರು.

Author