ಶಿವಮೊಗ್ಗ | ಮನೆಗೆ ನುಗ್ಗಿ ವ್ಯಕ್ತಿಯ ಮೇಲೆ ಡ್ರ್ಯಾಗರ್‌ನಿಂದ ಹಲ್ಲೆ, ಜೀವ ಬೆದರಿಕೆ

ವಿಷಯ ತಿಳಿಯುತ್ತಿದ್ದಂತೆ ಆತಂಕಗೊಂಡ ತಂದೆ ತಕ್ಷಣವೇ ಮನೆಗೆ ಧಾವಿಸಿದ್ದಾರೆ. ಆದರೆ, ದೂರುದಾರರ ಬರುವಿಕೆಯನ್ನೇ ಹೊಂಚು ಹಾಕಿ ಕಾದು ಕುಳಿತಿದ್ದ ಆರೋಪಿಗಳ ಗುಂಪು, ಮತ್ತೊಮ್ಮೆ ಮನೆಗೆ ನುಗ್ಗಿದೆ. ಈ ವೇಳೆ ತಂದೆಯ ಮೇಲೆ ದುಷ್ಕರ್ಮಿಗಳು ಮಾರಕಾಸ್ತ್ರವಾದ ಡ್ರ್ಯಾಗರ್‌ನಿಂದ ಅವರ ಬೆನ್ನಿಗೆ ಚುಚ್ಚಿ ಗಂಭೀರವಾಗಿ ಗಾಯಗೊಳಿಸಿದ್ದಾರೆ. ಅಲ್ಲದೆ, ನಿನ್ನನ್ನು ಜೀವಸಹಿತ ಬಿಡುವುದಿಲ್ಲ ಎಂದು ಪ್ರಾಣ ಬೆದರಿಕೆ ಹಾಕಿ ಸ್ಥಳದಿಂದ ಪರಾರಿಯಾಗಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.