ಹೊಸನಗರ,ತಾಲೂಕಿನಲ್ಲಿ ಹಾದು ಹೋಗಿರುವ ಕೊಲ್ಲೂರು ರಾಷ್ಟ್ರೀಯ ಹೆದ್ದಾರಿಯ ಮರಕುಟಿಕ ಕ್ರಾಸ್ ಬಳಿ ಟ್ರಾಕ್ಟರ್ ಮತ್ತು ಕಾರು ಮುಖಾಮುಖಿ ಡಿಕ್ಕಿಯಾಗಿ ಮೂವರು ಗಾಯಗೊಂಡಿದ್ದಾರೆ.
ಸಾಗರದ ಜೆ.ಪಿ. ನಗರ ನಿವಾಸಿ ಅರುಣ್ ಕುಮಾರ್ ಅವರು ತಮ್ಮ ತಾತ ಆನಂದ್ (80), ತಾಯಿ ನಾಗರತ್ನ (51) ಹಾಗೂ ಅಜ್ಜಿ ರುಕ್ಮಿಣಿ (65) ಅವರೊಂದಿಗೆ ಕಾರಿನಲ್ಲಿ ಬೆನ್ನಟ್ಟೆಯ ದೇವಸ್ಥಾನಕ್ಕೆ ತೆರಳಿ ವಾಪಸ್ ಆಗುತ್ತಿದ್ದಾಗ ಅಪಘಾತ ಸಂಭವಿಸಿದೆ.
ನಿಟ್ಟೂರು ಕಡೆಯಿಂದ ಬಂದ ಟ್ರಾಕ್ಟರ್ ಕಾರಿಗೆ ಡಿಕ್ಕಿ ಹೊಡೆಸಿದಿದೆ. ಡಿಕ್ಕಿಯ ರಭಸಕ್ಕೆ ಟ್ರಾಕ್ಟರ್ನ ಚಕ್ರವು ಕಾರಿನ ಮುಂಭಾಗದ ಮೇಲೆ ಹತ್ತಿ ರಸ್ತೆ ಪಕ್ಕಕ್ಕೆ ಪಲ್ಟಿಯಾಗಿದೆ.
ಅಪಘಾತದಲ್ಲಿ ಕಾರಿನಲ್ಲಿದ್ದ ನಾಗರತ್ನ, ಆನಂದ್ ಹಾಗೂ ರುಕ್ಕಿಣಿ ಅವರಿಗೆ ಗಾಯವಾಗಿದೆ. ಗಾಯಾಳುಗಳನ್ನು ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರು ಚಾಲನೆ ಮಾಡುತ್ತಿದ್ದ ಅರುಣ್ ಕುಮಾರ್ ಯಾವುದೇ ಗಾಯಗಳಿಲ್ಲದೆ ಪಾರಾಗಿದ್ದಾರೆ.
ಘಟನೆ ಸಂಬಂಧ ಟ್ರಾಕ್ಟರ್ ಚಾಲಕ ಆರೀಫ್ ವಿರುದ್ಧ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


