ಹುಲಿಕಲ್ ಘಾಟ್‌ನಲ್ಲಿ ಇಂದಿನಿಂದ ಲಘು ವಾಹನಗಳ ಸಂಚಾರಕ್ಕೆ ಅವಕಾಶ
ನಂತರದ ದಿನಗಳಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ಚಂಡಿಕಾಂಬ ದೇವಸ್ಥಾನದ ಬಳಿ ಮೆಟ್ಟಿಲುಗಳನ್ನು ಬಳಸಿಕೊಂಡು ವಾಹನಗಳ ಅದಲು-ಬದಲು (ಷಟಲ್ ಸರ್ವೀಸ್) ಮೂಲಕ ಸಂಚಾರಕ್ಕೆ ಅನುವು ಮಾಡಿಕೊಡಲಾಗಿತ್ತು.ಪ್ರಸ್ತುತ ಘಾಟ್ ರಸ್ತೆಯ ತಿರುವಿನಲ್ಲಿ ತಡೆಗೋಡೆ ನಿರ್ಮಿಸಿ, ರಸ್ತೆಯ ಮಟ್ಟದವರೆಗೆ ಮಣ್ಣಿನ ಏರಿಯೊಂದಿಗೆ ಲೀನ್ ಕಾಂಕ್ರೀಟ್ ಹಾಕಿ ರಸ್ತೆಯನ್ನು ತಾತ್ಕಾಲಿಕವಾಗಿ ದುರಸ್ತಿಗೊಳಿಸಲಾಗಿದೆ. ಲೋಕೋಪಯೋಗಿ ಇಲಾಖೆ ಕಾರ್ಯಪಾಲಕ ಇಂಜಿನಿಯರ್, ಪೊಲೀಸ್ ಅಧೀಕ್ಷಕರು ಹಾಗೂ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ವರದಿ ಮತ್ತು ಪ್ರಸ್ತಾವನೆಯನ್ನು ಪರಿಶೀಲಿಸಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.
Copy and paste this URL into your WordPress site to embed
Copy and paste this code into your site to embed