ಹೊಸನಗರ | ಸಚಿವ ಸ್ಥಾನಕ್ಕಾಗಿ ಶಾಸಕ ಬೇಳೂರು ಗೋಪಾಲಕೃಷ್ಣ ಪರ ಧರ್ಮಸ್ಥಳದಲ್ಲಿ ಮುಡಿ ಕೊಟ್ಟು ಪ್ರಾರ್ಥಿಸಿದ ಕಾಂಗ್ರೆಸ್ ಮುಖಂಡರು

ಜೂನ್ ತಿಂಗಳ ಕೊನೆಯಲ್ಲಿ ನಡೆಯುವ ಸಾಧ್ಯತೆಯಿರುವ ಸಚಿವ ಸಂಪುಟ ವಿಸ್ತರಣೆಯಲ್ಲಿ ಬೇಳೂರು ಗೋಪಾಲಕೃಷ್ಣ ಅವರಿಗೆ ಸಚಿವ ಸ್ಥಾನ ದೊರಕಲೇಬೇಕು ಎಂದು ಆಶಿಸಿ ಯೂತ್ ಕಾಂಗ್ರೆಸ್ ಅಧ್ಯಕ್ಷ ವಿಜಯ್ ಮಳವಳ್ಳಿ ಹಾಗೂ ಕಾಂಗ್ರೆಸ್ ಮುಖಂಡ ರಮೇಶ್ ಅವರು ಧರ್ಮಸ್ಥಳದ ಶ್ರೀ ಮಂಜುನಾಥೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ಮುಡಿ ಸಮರ್ಪಿಸಿ ವಿಶೇಷ ಪೂಜೆ ಸಲ್ಲಿಸಿದರು.