ಶಿವಮೊಗ್ಗ ಕಲಾವಿದ ಚಾರಿಟೇಬಲ್ ಟ್ರಸ್ಟ್ ಪ್ರಾರಂಭ ಗೊಂಡು 22 ವರ್ಷ ಸತತವಾಗಿ ಸಮಾಜ ಸೇವೆಗಳನ್ನು ನಡೆಸಿಕೊಂಡು ಬರುತ್ತಿದೆ.
22 ವರ್ಷದ ಈ ಸಂಭ್ರಮದಲ್ಲಿ ಟ್ರಸ್ಟ್ ವತಿಯಿಂದ ಸರ್ಕಾರಿ ಶಾಲೆಯ 6,7 ಮತ್ತು 8 ನೇ ತರಗತಿ ಮಕ್ಕಳಿಗೆ ಉಚಿತ ನೋಟ್ ಬುಕ್ ವಿತರಿಸಲಾಯಿತು, ಅಲ್ಲದೆ ಹಲವು ಸಾಧಕರಿಗೆ ಸನ್ಮಾನವನ್ನು ನೆರವೇರಿಸಲಾಯಿತು.
ನಗರದ ಅಂಬೇಡ್ಕರ್ ಭವನದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮವನ್ನು ಟ್ರಸ್ಟಿನ ಅಧ್ಯಕ್ಷರಾದ ಕಲಾವಿದ ನಡೆಸಿಕೊಟ್ಟರು.


