ಶಿವಮೊಗ್ಗ | ಅರ್ಹ ಬಡವರ ಬಿಪಿಎಲ್ ಕಾರ್ಡ್ ರದ್ದತಿಯಿಂದ ಜನಸಾಮಾನ್ಯರ ಬದುಕು ದುಸ್ತರ ; ತಕ್ಷಣವೇ ಮರುಪರಿಶೀಲಿಸಿ ವರದಿ ಸಲ್ಲಿಸಲು ಅಧಿಕಾರಿಗಳಿಗೆ ಶಾಸಕ ಎಸ್.ಎನ್. ಚನ್ನಬಸಪ್ಪ ಖಡಕ್ ಸೂಚನೆ

ನಗರದಲ್ಲಿ ರದ್ದಾಗಿರುವ ಬಿಪಿಎಲ್ ಕಾರ್ಡ್‌ನ ದೂರುಗಳ ಕುರಿತು ತಳಮಟ್ಟದಲ್ಲಿ ಸಮಗ್ರ ಮರುಪರಿಶೀಲನೆ ನಡೆಸಿ, ಅರ್ಹ ಕುಟುಂಬಗಳಿಗೆ ತಕ್ಷಣವೇ ಪಡಿತರ ಚೀಟಿಗಳನ್ನು ಮರುಸ್ಥಾಪಿಸಲು ಕ್ರಮ ಕೈಗೊಳ್ಳಬೇಕು ಮತ್ತು ಈ ಇಡೀ ಪ್ರಕ್ರಿಯೆಯ ಕುರಿತು ಕೈಗೊಂಡ ಕ್ರಮಗಳ ಸವಿಸ್ತಾರ ವರದಿಯನ್ನು ಶೀಘ್ರದಲ್ಲೇ ಸಲ್ಲಿಸಬೇಕು ಎಂದು ಅಧಿಕಾರಿಗಳಿಗೆ ಶಾಸಕರು ನಿರ್ದೇಶನ ನೀಡಿದ್ದಾರೆ.