ಶಿವಮೊಗ್ಗ, ರಾಜ್ಯ ಪೊಲೀಸ್ ಇಲಾಖೆಯಲ್ಲಿ ಗಣನೀಯ ಸೇವೆ ಸಲ್ಲಿಸಿದ ಅಧಿಕಾರಿ ಹಾಗೂ ಸಿಬ್ಬಂದಿಗೆ ನೀಡಲಾಗುವ ಡಿಜಿ ಮತ್ತು ಐಜಿಪಿ ಪ್ರಶಂಸಾ ಪದಕದ ಪಟ್ಟಿ ಪಕಟವಾಗಿದೆ. ಶಿವಮೊಗ್ಗದ ಇಬ್ಬರು ಪೊಲೀಸ್ ಅಧಿಕಾರಿಗಳು ಪದಕಕ್ಕೆ ಪಾತ್ರರಾಗಿದ್ದಾರೆ.
ಶಿವಮೊಗ್ಗದ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ (ಎಎಸ್ಪಿ) ಎ.ಜಿ. ಕಾರ್ಯಪ್ಪ ಹಾಗೂ ಜಿಲ್ಲಾ ಸಶಸ್ತ್ರ ಮೀಸಲು ಪಡೆಯ (ಡಿಎಆರ್) ಡಿವೈಎಸ್ಪಿ ದಿಲೀಪ್ ಎಸ್.ವಿ. ಅವರಿಗೆ ಪದಕ ಲಭಿಸಿದೆ.
ರಾಜ್ಯ ಪೊಲೀಸ್ ಮಹಾನಿರ್ದೇಶಕ ಡಾ. ಎಂ.ಎ. ಸಲೀಂ ಅವರು ಈ ಪ್ರಶಸ್ತಿ ಪಟ್ಟಿಯನ್ನು ಪ್ರಕಟಿಸಿದ್ದಾರೆ. ರಾಜ್ಯದಾದ್ಯಂತ ವಿವಿಧ ದರ್ಜೆಯ ಒಟ್ಟು 200 ಪೊಲೀಸ್ ಅಧಿಕಾರಿಗಳನ್ನು ಈ ಬಾರಿ ಶ್ಲಾಘನಾ ಪದಕಕ್ಕೆ ಆಯ್ಕೆ ಮಾಡಲಾಗಿದೆ.


