ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ನಗರ ಮುಖ್ಯ ರಸ್ತೆಯಲ್ಲಿ ಬೃಹತ್ ಗಾತ್ರದ ಮರ ಬಿದ್ದು ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿತ್ತು.

ಮಾಹಿತಿ ತಿಳಿದ ತಕ್ಷಣ ನಗರ ಅರಣ್ಯ ಇಲಾಖೆ, ಪೊಲೀಸ್ ಇಲಾಖೆ ಹಾಗೂ ಸ್ಥಳೀಯ ಸಾರ್ವಜನಿಕರು ಸ್ಥಳಕ್ಕೆ ಆಗಮಿಸಿ, ಸಂಯುಕ್ತವಾಗಿ ಮರವನ್ನು ತೆರವುಗೊಳಿಸಿದರು.

ಕಾರ್ಯಾಚರಣೆಯಿಂದ ರಸ್ತೆ ಸಂಚಾರವನ್ನು ಶೀಘ್ರದಲ್ಲೇ ಪುನಃ ಸುಗಮಗೊಳಿಸಲಾಯಿತು. ತುರ್ತು ಪರಿಸ್ಥಿತಿಯಲ್ಲಿ ಸಮನ್ವಯದಿಂದ ಕಾರ್ಯನಿರ್ವಹಿಸಿದ ಅರಣ್ಯ ಇಲಾಖೆ, ಪೊಲೀಸ್ ಇಲಾಖೆ ಹಾಗೂ ಸಹಕರಿಸಿದ ಸಾರ್ವಜನಿಕರ ಕಾರ್ಯಕ್ಕೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.


