ಶಿವಮೊಗ್ಗ, ಮಹಾರಾಜ ಟ್ರೋಫಿ ಕ್ರಿಕೆಟ್ ಪಂದ್ಯಾವಳಿಯ ಅಂತಿಮ ಹಣಾಹಣಿಯಲ್ಲಿ ಬೆಂಗಳೂರು ಬ್ಲಾಸ್ಟರ್ಸ್ ವಿರುದ್ಧ ರೋಚಕ ಜಯ ಸಾಧಿಸಿ ಮೊದಲ ಬಾರಿಗೆ ಚಾಂಪಿಯನ್ ಪಟ್ಟ ಗೆದ್ದ ಶಿವಮೊಗ್ಗ ಯೋಧಾಸ್ಗೆ ತಂಡಕ್ಕೆ ಶಿವಮೊಗ್ಗ ಸಂಸದ ಬಿ.ವೈ.ರಾಘವೇಂದ್ರ ಹೆಮ್ಮೆಯ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.
ಈ ಕುರಿತು ತಮ್ಮ ಅಧಿಕೃತ ‘X’ ನಲ್ಲಿ ಹೇಳಿಕೆ ನೀಡಿರುವ ಸಂಸದರು, “ಮಲೆನಾಡಿನ ಕ್ರೀಡಾ ಇತಿಹಾಸದಲ್ಲಿ ಇದು ಸುವರ್ಣಾಕ್ಷರಗಳ ಮುನ್ನುಡಿಯಾಗಿದ್ದು, ನಮ್ಮ ಜಿಲ್ಲೆಯ ಪ್ರತಿಭಾವಂತರ ಕ್ರೀಡಾ ಯಾನ ಹೀಗೆಯೇ ಎಲ್ಲಾ ಕ್ರೀಡೆಗಳಲ್ಲಿ ಯಶಸ್ವಿಯಾಗಿ ಮುಂದುವರಿಯಲಿ ಎಂದು ಹಾರೈಸುತ್ತೇನೆ” ಎಂದಿದ್ದಾರೆ.

“ಪ್ರತಿಷ್ಠಿತ ಮಹಾರಾಜ ಟ್ರೋಫಿ ಟಿ20 ಕ್ರಿಕೆಟ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಬೆಂಗಳೂರು ಬ್ಲಾಸ್ಟರ್ಸ್ ವಿರುದ್ಧ ರೋಚಕ ಜಯ ಸಾಧಿಸಿ ಚಾಂಪಿಯನ್ ಪಟ್ಟ ಅಲಂಕರಿಸಿದ ನಮ್ಮ ಹೆಮ್ಮೆಯ ‘ಶಿವಮೊಗ್ಗ ಯೋಧಾಸ್’ ತಂಡಕ್ಕೆ ಹಾರ್ದಿಕ ಅಭಿನಂದನೆಗಳು. ಇಡೀ ನಮ್ಮ ಶಿವಮೊಗ್ಗ ಜಿಲ್ಲೆಗೆ ಹೆಮ್ಮೆ ತಂದ ಅಪೂರ್ವ ಸಂದರ್ಭವಿದು. ಟೂರ್ನಿ ಉದ್ದಕ್ಕೂ ಶಿವಮೊಗ್ಗ ತಂಡದ ಸಾಂಘಿಕ ಹೋರಾಟಕ್ಕೆ ಸಿಕ್ಕ ಅರ್ಹ ವಿಜಯಯಾತ್ರೆ ಜಿಲ್ಲೆಯ ಎಲ್ಲ ಕ್ರೀಡಾಪಟುಗಳಿಗೆ, ಕ್ರೀಡಾ ಪ್ರೇಮಿಗಳಿಗೆ ಸಂತಸ ನೀಡಿದೆ ಎಂದಿದ್ದಾರೆ.
ನಮ್ಮ ಜಿಲ್ಲೆಯ ಪ್ರತಿಭಾವಂತ ಯುವಕರು ಜಾಗತಿಕ ಮಟ್ಟದಲ್ಲಿ ಮಿನುಗಬಲ್ಲರು ಎನ್ನುವುದಕ್ಕೆ ಶಿವಮೊಗ್ಗ ಯೋಧಾಸ್ ತಂಡದ ಈ ಐತಿಹಾಸಿಕ ವಿಜಯವೇ ಸಾಕ್ಷಿ! ಮಲೆನಾಡಿನ ಕ್ರೀಡಾ ಇತಿಹಾಸದಲ್ಲಿ ಇದು ಸುವರ್ಣಾಕ್ಷರಗಳ ಮುನ್ನುಡಿಯಾಗಿದ್ದು, ನಮ್ಮ ಜಿಲ್ಲೆಯ ಪ್ರತಿಭಾವಂತರ ಕ್ರೀಡಾ ಯಾನ ಹೀಗೆಯೇ ಎಲ್ಲಾ ಕ್ರೀಡೆಗಳಲ್ಲಿ ಯಶಸ್ವಿಯಾಗಿ ಮುಂದುವರಿಯಲಿ ಎಂದು ಹಾರೈಸುತ್ತೇನೆ” ಎಂದು ಸಂಸದ ರಾಘವೇಂದ್ರ ಅವರು, ಟೂರ್ನಿ ಗೆದ್ದ ಶಿವಮೊಗ್ಗ ತಂಡಕ್ಕೆ ಶುಭ ಹಾರೈಸಿದ್ದಾರೆ.
