ಶಿವಮೊಗ್ಗ | ಗುತ್ತಿಗೆ ಆಧಾರದಲ್ಲಿ 15 ಶುಶ್ರೂಷಾಧಿಕಾರಿಗಳ ಹುದ್ದೆಗೆ ಅರ್ಜಿ ಆಹ್ವಾನ

ಉದ್ಯೋಗ

ಶಿವಮೊಗ್ಗ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿಯಿರುವ 15 ಶುಶ್ರೂಷಾಧಿಕಾರಿ ಹುದ್ದೆಗಳನ್ನು ಒಂದು ವರ್ಷದ ಅವಧಿಗೆ ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಅಭ್ಯರ್ಥಿಗಳು ಕರ್ನಾಟಕ ಸರ್ಕಾರದಿಂದ ಮಾನ್ಯತೆ ಪಡೆದ ಶಾಲೆ/ಸಂಸ್ಥೆಗಳಲ್ಲಿ ನರ್ಸಿಂಗ್ ಶಿಕ್ಷಣ ಪೂರೈಸಿರಬೇಕು.ಕರ್ನಾಟಕ ನರ್ಸಿಂಗ್ ಕೌನ್ಸಿಲ್ ನಲ್ಲಿ ಕಡ್ಡಾಯವಾಗಿ ನೋಂದಣಿಯಾಗಿರಬೇಕು.ಈ ನೇಮಕಾತಿಯು ನಿಯಮಾನುಸಾರ ಷರತ್ತುಗಳಿಗೆ ಒಳಪಟ್ಟಿರುತ್ತದೆ.

ಅರ್ಜಿ ನಮೂನೆಯನ್ನು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ, ಬಿ.ಹೆಚ್. ರಸ್ತೆ, ಶಿವಮೊಗ್ಗವಿಲ್ಲಿ ಪಡೆದು ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ ದಾಖಲೆಗಳೊಂದಿಗೆ ಜುಲೈ 30 ರೊಳಗಾಗಿ ಕಚೇರಿಗೆ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿಯನ್ನು ಖುದ್ದಾಗಿ ಭೇಟಿ ಮಾಡಬಹುದು ಅಥವಾ ದೂರವಾಣಿ ಸಂಖ್ಯೆ 08182-222382 ಅನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ತಿಳಿಸಿದ್ದಾರೆ.

Author