ಹೊಸನಗರ, ಇತ್ತೀಚೆಗೆ ದೆಹಲಿಯ ಸಂಸತ್ ಭವನದ ಮುಂದೆ ನೀಟ್ ಪರೀಕ್ಷೆ ಹಗರಣ ಕುರಿತು ಸೂಕ್ತ ತನಿಖೆ ನಡೆಸುವಂತೆ ಆಗ್ರಹಿಸಿ ವಿದ್ಯಾರ್ಥಿಗಳು ನಡೆಸುತ್ತಿದ್ದ ಪ್ರತಿಭಟನೆ ವೇಳೆ ಕೇಂದ್ರ ಬಿಜೆಪಿ ಸರಕಾರ ಕೇಂದ್ರ ವಿಪಕ್ಷ ನಾಯಕ, ಸಂಸದ ರಾಹುಲ್ ಗಾಂಧಿಯವರನ್ನು ಬಂಧಿಸಿ, ಸಾವಿರಾರು ವಿದ್ಯಾರ್ಥಿಗಳ ಮೇಲೆ ಪೊಲೀಸರು ಏಕಾಏಕಿ ಲಾಠಿ ಚಾರ್ಜ್ ನಡೆಸಿದ ಕ್ರಮವನ್ನು ತೀವ್ರವಾಗಿ ಖಂಡಿಸಿ ತಾಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ. ಜಿ. ಚಂದ್ರಮೋಳಿ ನೇತೃತ್ವದಲ್ಲಿ ಬುಧವಾರ ಕೋರ್ಟ್ ಸರ್ಕಲ್ ಬಳಿ ರಸ್ತೆ ತೆಡೆದು ಬಿಜೆಪಿ ಸರಕಾರ ವಿರುದ್ಧ ಟೈರ್ ಗೆ ಬೆಂಕಿ ಹಚ್ಚಿ ಆಕ್ರೋಶ ಹೊರ ಹಾಕಿದರು.
ಈ ಸಂದರ್ಭದಲ್ಲಿ ಮಾತನಾಡಿದ ಚಂದ್ರಮೋಳಿ ಅವರು, “ವಿದ್ಯಾರ್ಥಿಗಳ ಭವಿಷ್ಯದ ಜೊತೆ ಚೆಲ್ಲಾಟವಾಡುತ್ತಿರುವ ಕೇಂದ್ರ ಸರ್ಕಾರ ತಕ್ಷಣ ನೀಟ್ ಹಗರಣದ ಬಗ್ಗೆ ಸೂಕ್ತ ತನಿಖೆ ನಡೆಸಬೇಕು. ಪ್ರಜಾಪ್ರಭುತ್ವದಲ್ಲಿ ಪ್ರತಿಭಟಿಸುವ ಹಕ್ಕನ್ನು ಹತ್ತಿಕ್ಕುವ ಕೆಲಸ ಸರಿಯಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ. ಜಿ. ಚಂದ್ರಮೋಳಿ,ಶಾಸಕರ ಆಪ್ತ ಕಾರ್ಯದರ್ಶಿ ಸಣ್ಣಕಿ ಮಂಜು, ಪಕ್ಷದ ಕಾರ್ಯಕರ್ತರು ಹಾಜರಿದ್ದರು.
