ಬಿಜೆಪಿ ಯುವ ಮೋರ್ಚಾ ಶಿವಮೊಗ್ಗ ಜಿಲ್ಲೆ ವತಿಯಿಂದ ಕುವೆಂಪು ವಿಶ್ವವಿದ್ಯಾಲಯದ ವಿರುದ್ಧ ಪ್ರತಿಭಟನೆ ಹಾಗೂ ಮನವಿ

ಶಿವಮೊಗ್ಗ

ಶಿವಮೊಗ್ಗ,ಕುವೆಂಪು ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿ ವಿರೋಧಿ ನೀತಿಗಳು, ಆಡಳಿತ ವೈಫಲ್ಯ, ಭ್ರಷ್ಟಾಚಾರ ಹಾಗೂ ಅವ್ಯವಸ್ಥೆಗಳ ವಿರುದ್ಧ ಬಿಜೆಪಿ ಯುವ ಮೋರ್ಚಾ ಶಿವಮೊಗ್ಗ ಜಿಲ್ಲೆ ವತಿಯಿಂದ ಪ್ರತಿಭಟನೆ ನಡೆಸಿ, ಕುಲಪತಿಗಳನ್ನು ವಜಾಗೊಳಿಸುವಂತೆ ಆಗ್ರಹಿಸಿ ರಿಜಿಸ್ಟ್ರಾರ್ ಅವರಿಗೆ ಮನವಿ ಸಲ್ಲಿಸಲಾಯಿತು.

ಪ್ರಮುಖ ಆಗ್ರಹಗಳು:

  • ವಿದ್ಯಾರ್ಥಿಗಳ ಶುಲ್ಕ ಹೆಚ್ಚಳವನ್ನು ಕೂಡಲೇ ಹಿಂಪಡೆಯಬೇಕು.
  • Marks Card ವಿತರಣೆಯಲ್ಲಿನ ವಿಳಂಬವನ್ನು ತಕ್ಷಣ ಸರಿಪಡಿಸಬೇಕು.
  • Convocation (ಪದವಿ ಪ್ರದಾನ) ಶುಲ್ಕವನ್ನು ಕಡಿಮೆ ಮಾಡಬೇಕು.
  • LMS ಸೇರಿದಂತೆ ವಿವಿಧ ಹೆಸರಿನಲ್ಲಿ ವಿದ್ಯಾರ್ಥಿಗಳಿಂದ ಹೆಚ್ಚುವರಿ ಶುಲ್ಕ ವಸೂಲಿ ಮಾಡುವುದನ್ನು ರದ್ದುಪಡಿಸಬೇಕು.
  • ಹಾಸ್ಟೆಲ್, ಗ್ರಂಥಾಲಯ ಹಾಗೂ ಮೂಲಭೂತ ಸೌಲಭ್ಯಗಳನ್ನು ಅಭಿವೃದ್ಧಿಪಡಿಸಬೇಕು.
  • ಗುತ್ತಿಗೆ ನೌಕರರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸಬೇಕು.
  • ನೇಮಕಾತಿ, ಟೆಂಡರ್, ಖರೀದಿ ಹಾಗೂ ಆಡಳಿತದಲ್ಲಿ ನಡೆದಿರುವ ಭ್ರಷ್ಟಾಚಾರದ ಕುರಿತು ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು.
  • ವಿದ್ಯಾರ್ಥಿಗಳ ಹಿತಾಸಕ್ತಿಗೆ ವಿರುದ್ಧವಾಗಿರುವ ಎಲ್ಲಾ ನಿರ್ಧಾರಗಳನ್ನು ಹಿಂಪಡೆಯಬೇಕು.
  • ಆಡಳಿತ ವೈಫಲ್ಯಕ್ಕೆ ಹೊಣೆ ಹೊತ್ತು ಕುಲಪತಿಗಳು ರಾಜೀನಾಮೆ ನೀಡಬೇಕು.

ಮನವಿಗೆ ಸ್ಪಂದಿಸಿ ಸಮಸ್ಯೆಗಳನ್ನು ಶೀಘ್ರವಾಗಿ ಪರಿಹರಿಸದಿದ್ದಲ್ಲಿ ಬಿಜೆಪಿ ಯುವ ಮೋರ್ಚಾ ಉಗ್ರ ಹೋರಾಟ ನಡೆಸಲಿದೆ ಎಂದು ಎಚ್ಚರಿಕೆ ನೀಡಲಾಯಿತು.

ಈ ಪ್ರತಿಭಟನೆಯ ಅಧ್ಯಕ್ಷತೆಯನ್ನು ಬಿಜೆಪಿ ಯುವ ಮೋರ್ಚಾ ಶಿವಮೊಗ್ಗ ಜಿಲ್ಲಾ ಅಧ್ಯಕ್ಷರಾದ ಪ್ರಶಾಂತ್ ಕುಕ್ಕೆ ಅವರು ವಹಿಸಿದ್ದರು.

ಈ ಸಂದರ್ಭದಲ್ಲಿ ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಹಾಗೂ ಪ್ರಭಾರಿಗಳಾದ ರಾಮಣ್ಣ, ಯುವ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಅರುಣ್ ಕುಗ್ವೆ ಹಾಗೂ ದರ್ಶನ್, ಯುವ ಮೋರ್ಚಾ ಶಿವಮೊಗ್ಗ ನಗರ ಮಂಡಲ ಅಧ್ಯಕ್ಷ ರಾಹುಲ್ ಬಿದರೆ, ಗ್ರಾಮಾಂತರ ಮಂಡಲ ಅಧ್ಯಕ್ಷ ಅನಿಲ್ ಲಕ್ಕಿನಕೊಪ್ಪ, ಭದ್ರಾವತಿ ಮಂಡಲ ಅಧ್ಯಕ್ಷ ಪ್ರಜ್ವಲ್, ಹೊಳೆಹೊನ್ನೂರು ಮಂಡಲ ಅಧ್ಯಕ್ಷ ಕಿರಣ್ ಪಟೇಲ್, ಜಿಲ್ಲಾ ಉಪಾಧ್ಯಕ್ಷರಾದ ಸಂಜಯ್ ಹಾಗೂ ಯಶಸ್ವಿ, ಜಿಲ್ಲಾ ಕಾರ್ಯದರ್ಶಿಗಳಾದ ಹರೀಶ್ ನಾಯ್ಕ್ ಹಾಗೂ ಯುವರಾಜ್, ಜಿಲ್ಲಾ ಖಜಾಂಚಿ ವಿವೇಕ್ ಹೆಬ್ಬಾರ್, ಜಿಲ್ಲಾ ಮಾಧ್ಯಮ ಸಂಚಾಲಕ ಚಂದ್ರಶೇಖರ್, ಶಿವಮೊಗ್ಗ ನಗರ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಹಾಗೂ ಶಶಿಕುಮಾರ್, ಜಿಲ್ಲಾ ಹಾಗೂ ಮಂಡಲ ಪದಾಧಿಕಾರಿಗಳು ಮತ್ತು ಬಿಜೆಪಿ ಯುವ ಮೋರ್ಚಾದ ಕಾರ್ಯಕರ್ತರು ಉಪಸ್ಥಿತರಿದ್ದರು.

Author