ಶಿವಮೊಗ್ಗ | 300ರೂಪಾಯಿ ಸಾಲ ವಾಪಾಸ್ ಕೇಳಿದಕ್ಕೆ ಮಾರಣಾಂತಿಕ ಹಲ್ಲೆ

ಶಿವಮೊಗ್ಗ

ಶಿವಮೊಗ್ಗದ ದೊಡ್ಡಪೇಟೆ ಪೊಲೀಶ್ ಠಾಣೆಯ ವ್ಯಾಪ್ತಿಯಲ್ಲಿ ಸಾಲ ವಾಪಸ್ ಕೇಳಿದ್ದಕ್ಕೆ ಆತನ ಮೇಲೆ ಹಲ್ಲೆ ಮಾಡಲಾಗಿದೆ. ಪರಿಣಾಮ ಹಲ್ಲೆಗೊಳಗಾದ ವ್ಯಕ್ತಿ ಕೋಮಾಕ್ಕೆ ತೆರಳಿದ್ದಾರೆ.

ಘಟನೆಯಲ್ಲಿ ಆರೋಪಿಗಳು ಯುವಕನ ಮೇಲೆ ಹಲ್ಲೆ ಮಾಡಿದ್ದಷ್ಟೆ ಅಲ್ಲದೆ, ಆತನನ್ನು ಮನೆಗೆ ಕರೆತಂದು ನಾಟಕವಾಡಿದ್ದಾರೆ ಎಂದು ಆರೋಪಿಸಲಾಗಿದೆ.

ಸ್ನೇಹಿತರಿಂದ ತೆಗೆದುಕೊಂಡಿದ್ದ ಕೇವಲ 300 ರೂಪಾಯಿ ಸಾಲವನ್ನು ಹಿಂದಿರುಗಿಸುವಂತೆ ಕೇಳಿದ್ದಕ್ಕೆ, ಹುಟ್ಟುಹಬ್ಬದ ದಿನವೇ ಯುವಕನ ಮೇಲೆ ಆತನ ಇಬ್ಬರು ಸ್ನೇಹಿತರು ಮಾರಣಾಂತಿಕ ಹಲ್ಲೆ ನಡೆಸಿ, ಕೊಲೆಗೆ ಪ್ರಯತ್ನಿಸಿದ್ದಾರೆ ಎಂದು ಆರೋಪಿಸಿ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ದೂರುದಾಖಲಾಗಿದ್ದು,

ಈ ಸಂಬಂಧ ಭಾರತೀಯ ನ್ಯಾಯ ಸಂಹಿತೆ (BNS), 2023 ರ ಕಲಂ 352, 115(2), 109(1), 3(5) ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

Author