ಶಿವಮೊಗ್ಗ ಜಿಲ್ಲಾ ಮಹಿಳಾ ಕಾಂಗ್ರೆಸ್ ಮಾಜಿ ಅಧ್ಯಕ್ಷೆ, ಮಹಾನಗರ ಪಾಲಿಕೆ ಮಾಜಿ ಉಪ ಮೇಯರ್ ವಿಜಯಲಕ್ಷಿ ಪಾಟೀಲ್ ಅವರು ಇಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಆಯ್ಕೆಯಾಗಲು ಹಾಲಿ ಅಧ್ಯಕ್ಷರಾದ ಆರ್. ಪ್ರಸನ್ನಕುಮಾರ್ ಮೂಲಕ ನಾಮಪತ್ರ ಸಲ್ಲಿಸಿದರು.
ಈ ಸಂದರ್ಭದಲ್ಲಿ ಪ್ರಮುಖರಾದ ಸುವರ್ಣ ನಾಗರಾಜ್, ಭಾರತಿ, ಕವಿತಾ ರಾಘವೇಂದ್ರ, ಸುಶೀಲಾ, ಜಯಲಕ್ಷಿ, ಭಾಗ್ಯ, ನಾಗರತ್ನಾ, ಸೌಭಾಗ್ಯ ಮತ್ತಿತರರಿದ್ದರು.
