ತೀರ್ಥಹಳ್ಳಿಯಲ್ಲಿ ಮನೆ ಮೇಲೆ ಗುಡ್ಡ ಕುಸಿತ ; ಮಗು ಸೇರಿ ಒಂದೇ ಕುಟುಂಬದ ಮೂವರು ದುರ್ಮರಣ

ಶಿವಮೊಗ್ಗ

ಶಿವಮೊಗ್ಗ,ಮನೆ ಮೇಲೆ ಗುಡ್ಡ ಕುಸಿದು ನಾಲ್ಕು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರು ಸಾವನ್ನಪ್ಪಿದ ದುರ್ಘಟನೆ ತೀರ್ಥಹಳ್ಳಿ ಪಟ್ಟಣದ ತಮ್ಮಡಿಕೊಪ್ಪ ಕೆರೆ ಬಳಿ ನಡೆದಿದೆ. ಮಲ್ಲಿಕಾರ್ಜುನ (30), ನಾಗವೇಣಿ(25) ಹಾಗೂ ದಂಪತಿಯ ಮಗ ಸಂತೋಷ್ (4) ಮೃತಪಟ್ಟವರು.

ಇವರೆಲ್ಲ ಗಂಗಾವತಿ ತಾಲೂಕಿನವರು. ಮಲಗಿದ್ದಾಗ ರಾತ್ರಿ ಮನೆ ಮೇಲೆ ಗುಡ್ಡ ಕುಸಿದಿದೆ. ಮಣ್ಣಿನಡಿ ಮೃತದೇಹಗಳು ಸಿಲುಕಿವೆ.

ತೆರವು ಕಾರ್ಯಕ್ಕೆ ಮಳೆಯಿಂದ ಕಷ್ಟವಾಗುತ್ತಿದೆ. ಸ್ಥಳಕ್ಕೆ ಪೊಲೀಸ್ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ತೀರ್ಥಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Author