ಬೆಳಗಾವಿ | ರೈತರ ಅಹವಾಲು ಸ್ವೀಕರಿಸಿದ ಮಧು ಬಂಗಾರಪ್ಪ ಮತ್ತು ಈಶ್ವರ್ ಖಂಡ್ರೆ

ರಾಜಕೀಯ

ಬೆಳಗಾವಿಯ ಸುವರ್ಣಸೌಧದ ಬಳಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ “ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ” ಹಮ್ಮಿಕೊಂಡಿದ್ದ ಬೆಳಗಾವಿ ಚಲೋ ಚಳವಳಿಯ ಪ್ರತಿಭಟನಾ ಸ್ಥಳಕ್ಕೆ ಅರಣ್ಯ ಇಲಾಖೆ ಸಚಿವರಾದ ಈಶ್ವರ್ ಖಂಡ್ರೆ ಅವರೊಂದಿಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪನವರು ಭೇಟಿ ನೀಡಿ, ಅಹವಾಲು ಸ್ವೀಕರಿಸಿದರು.

ಪ್ರತಿಭಟನಾನಿರತ ರೈತರ ವಿವಿಧ ಬೇಡಿಕೆಗಳ ಈಡೇರಿಕೆ ಕುರಿತು ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರ ಗಮನಕ್ಕೆ ತಂದು ರೈತರ ಪರವಾಗಿ ಪರಿಹಾರ ಒದಗಿಸುವ ಭರವಸೆ ನೀಡಿದರು.

ಈ ವೇಳೆ ಸಂಘದ ರಾಜ್ಯಧ್ಯಕ್ಷರಾದ ಕೋಡಿಹಳ್ಳಿ ಚಂದ್ರಶೇಖರ್ ಸೇರಿದಂತೆ ಹಲವಾರು ರೈತ ಮುಖಂಡರುಗಳು ಉಪಸ್ಥಿತರಿದ್ದರು.

Author